ತುಮಕೂರು ಲಾಡ್ಜ್‌ನಲ್ಲಿ ಸುರಂಗ- ಸುರಂಗದೊಳಗೆ ವೇಶ್ಯಾವಾಟಿಕೆ

Public TV
1 Min Read

ತುಮಕೂರು: ನಗರದ ಕ್ಯಾತ್ಸಂದ್ರ ವಸತಿ ಗೃಹವೊಂದರ ಮೇಲೆ ಸೋಮವಾರ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದು, ಐವರು ಪುರುಷರನ್ನು ಬಂಧಿಸಿದ್ದಾರೆ. ಒಬ್ಬ ಮಹಿಳೆ ತಪ್ಪಿಸಿಕೊಂಡು ಪರಾರಿಯಾಗಿದ್ದಾಳೆ.

ವಸತಿ ಗೃಹದಲ್ಲಿ ಸುರಂಗ ಕೊರೆದು ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ದಾಳಿ ಮಾಡಲು ಆಗಮಿಸಿದ ವೇಳೆ ಸೂಚನೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಈ ಸೂಚನೆ ಬರುತ್ತಿದ್ದಂತೆ ಮಹಿಳೆಯರು ಹಾಗೂ ಪುರುಷರನ್ನು ಗುಹೆಯಲ್ಲಿ ಬಚ್ಚಿಡಲಾಗುತಿತ್ತು. ಸುರಂಗ ಮಾರ್ಗ ಇರುವುದು ಗೊತ್ತಾಗದಂತೆ ನೋಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಹೊತ್ತಿ ಉರಿದ ಬೆಂಗಳೂರಿನ ಫ್ಲ್ಯಾಟ್ – ನೋಡನೋಡುತ್ತಲೇ ಮಹಿಳೆ ಸಜೀವ ದಹನ

ಮೈಸೂರಿನ ಒಡನಾಡಿ ಸಂಸ್ಥೆಯ ಸ್ನಾನಿ ಪರಶುರಾಮ್ ಅವರು ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದರು. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ವೇಶ್ಯಾವಾಟಿಕೆ ನಡೆಯುತ್ತಿದ್ದದ್ದು ಖಚಿತಪಟ್ಟಿದೆ. ಇದನ್ನೂ ಓದಿ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ 

ರಾಷ್ಟ್ರೀಯ ಹೆದ್ದಾರಿ 4ರ ಕ್ಯಾತ್ಸಂದ್ರ ಸೇತುವೆ ಸಮೀಪ ಕಳೆದ ಕೆಲ ದಿನಗಳ ಹಿಂದೆ ಕಾಂಡೋಮ್‍ಗಳ ರಾಶಿ ಚೆಲ್ಲಾಡಿದ್ದು ಪತ್ತೆಯಾಗಿತ್ತು. ಈ ಮಾಹಿತಿಯ ಜಾಡು ಹಿಡಿದು ವಿವರ ಸಂಗ್ರಹಿಸಿದಾಗ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿದೆ. ಈ ವಿಚಾರವನ್ನು ಎಸ್‍ಪಿ ಗಮನಕ್ಕೆ ತಂದ ನಂತರ ದಾಳಿ ನಡೆದಿದೆ ಎಂದು ಸ್ನಾನಿ ತಿಳಿಸಿದರು.

ಅಡಗುದಾಣಗಳನ್ನು ನಿರ್ಮಿಸಿ ವೇಶ್ಯಾವಾಟಿಕೆ ನಡೆಸುವ ವಸತಿಗೃಹ, ಇತರ ಕಟ್ಟಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಟ್ಟಡವನ್ನು ನೆಲಸಮ ಮಾಡುವಂತೆ ಕೋರ್ಟ್ ಆದೇಶವಿದೆ. ಹೀಗಾಗಿ ಈ ವಸತಿ ಗೃಹವನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಬೇಕು. ತನಿಖೆ ನಂತರ ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Share This Article
Leave a Comment

Leave a Reply

Your email address will not be published. Required fields are marked *