Lok Sabha Election: ಬಂಡಾಯವೆದ್ದ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ

By
1 Min Read

ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ (Eshwarappa) ಅವರನ್ನು ಬಿಜೆಪಿ (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ದೇಶವಾಸಿಗಳೇ ಎಚ್ಚರ, ಕಾಂಗ್ರೆಸ್‌ ನಿಮ್ಮ ಆಸ್ತಿ, ಚಿನ್ನದ ಮೇಲೆ ಕಣ್ಣಿಟ್ಟಿದೆ: ಮೋದಿ

 

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಧರ್ಮದ ತಾಯಂದಿರು ಗಂಡ-ಮಕ್ಕಳನ್ನ ಕಳೆದುಕೊಳ್ತಾರೆ: ಯತೀಂದ್ರ

ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದರೆ ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್‌ ಕಣದಲ್ಲಿ ಇದ್ದಾರೆ.

Share This Article