70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿರುವ ಬ್ರಿಜೇಶ್ ಚೌಟ (Brijesh Chowta) ಅವರು ಇಂದು ನಾಮಪತ್ರ ಸಲ್ಲಿಸಿದ್ದು ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಇಂದು ಸಾಂಕೇತಿಕವಾಗಿ ನಾಮಪತ್ರ (Nomination)ಸಲ್ಲಿಸಿದ್ದು ಏಪ್ರಿಲ್ 4ರಂದು ಅಧಿಕೃತವಾಗಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಶಿವಸೇನೆ ಸೇರಿದ ನಟ ಗೋವಿಂದ್

ಸಾಂಕೇತಿಕ ನಾಮಪತ್ರದ ಜೊತೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 27,31,365 ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 43,50,000 ಚರಾಸ್ತಿ ಸೇರಿ ಒಟ್ಟು 70,81,365 ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಇನ್ನೋವಾ ಕಾರಿನ ಮಾಲೀಕರಾಗಿರುವ ಇವರು ಈ ಕಾರಿಗಾಗಿ 9,62,010 ರೂ. ಸಾಲ ಮಾಡಿದ್ದಾರೆ. ಅವಿವಾಹಿತರಾಗಿರುವ 42 ವರ್ಷದ ಬ್ರಿಜೇಶ್ ಚೌಟ ಬಿಎಸ್‌ಸಿ ಶಿಕ್ಷಣದ ಜೊತೆಗೆ ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

80 ಸಾವಿರ ರೂ. ನಗದು ಹೊಂದಿರುವ ಇವರು 9 ಲಕ್ಷ ರೂ. ಮೌಲ್ಯದ 137 ಗ್ರಾಂ ಚಿನ್ನವನ್ನು ಹೊಂದಿದ್ದಾರೆ.

 

Share This Article