ಕಾಂಗ್ರೆಸ್‌ ಯೂ-ಟರ್ನ್‌ – Exit Polls ಚರ್ಚೆಗಳಲ್ಲಿ INDIA ಒಕ್ಕೂಟ ಭಾಗವಹಿಸುತ್ತೆ: ಪವನ್‌ ಖೇರಾ

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆಗೆ (Lok Sabha Election) ಸಂಬಂಧಿಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ (Exit Polls) ಭಾಗವಹಿಸಲು INDIA ಒಕ್ಕೂಟ ನಿರ್ಧರಿಸಿದೆ.

ಇಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಿವಾಸಲ್ಲಿ INDIA ಒಕ್ಕೂಟದ ಸದಸ್ಯರು ಭಾಗವಹಿಸಿ ಸಭೆ ನಡೆಸಿದರು. ಸಭೆಯ ಬಳಿಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಭಾಗವಹಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕಾಂಗ್ರೆಸ್‌ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್‌ ಖೇರಾ (Pawan Khera), ಸಭೆಯ ನಂತರ ಮೊದಲೇ ಪೂರ್ವ ನಿರ್ಧರಿತವಾಗಿರುವ ಎಕ್ಸಿಟ್‌ ಪೋಲ್‌ ಮತ್ತು ಬಿಜೆಪಿ ವ್ಯವಸ್ಥೆಯನ್ನು ಬಹಿರಂಗ ಪಡಿಸಲು ನಾವು ನಿರ್ಧರಿಸಿದ್ದೇವೆ. ಮೈತ್ರಿಯ ಎಲ್ಲಾ ಪಕ್ಷಗಳು ಇಂದು ಸಂಜೆ ವಾಹಿನಿಗಳ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸುತ್ತವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಶುಭ ಸುದ್ದಿ; ಪಿಒಕೆ ದೇಶದ ಅವಿಭಾಜ್ಯ ಅಂಗವಲ್ಲ – ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್!

ಶುಕ್ರವಾರ ಪೋಸ್ಟ್‌ ಮಾಡಿದ್ದ ಪವನ್‌ ಖೇರಾ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಮತ ಚಲಾಯಿಸಿದ್ದು, ತೀರ್ಪು ಭದ್ರವಾಗಿದೆ. ಚುನಾವಣೋತ್ತರ ಸಮೀಕ್ಷೆ ಚರ್ಚೆಯಲ್ಲಿ (Debate) ನಾವು ಭಾಗವಹಿಸುವುದಿಲ್ಲ. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ. ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದು ಆಗಿರಬೇಕು. ಆದರೆ ಆರ್‌ಪಿಗಾಗಿ ಊಹಾಪೋಹ ಮತ್ತು ಸ್ಲಗ್‌ಫೆಸ್ಟ್‌ನಲ್ಲಿ ಪಾಲ್ಗೊಳ್ಳಲು ನಮಗೆ ಇಷ್ಟವಿಲ್ಲ ಎಂದು ಬರೆದುಕೊಂಡಿದ್ದರು.

 

Share This Article