ಮತದಾನ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ

Public TV
1 Min Read

ಬೆಂಗಳೂರು: ಹಾಸನ (Hassana) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ (Prajwal Revanna) ಮತದಾನ ಮುಗಿದ ಬಳಿಕ ಜರ್ಮನಿಗೆ ತೆರಳಿದ್ದಾರೆ.

ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ  ಅಶ್ಲೀಲ ವಿಡಿಯೋ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ (Germany) ಫ್ರಂಕ್‌ಫರ್ಟ್‌ಗೆ ತೆರಳಿದ ಮಾಹಿತಿ ಲಭ್ಯವಾಗಿದೆ.  ಇದನ್ನೂ ಓದಿ: ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

 

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.  ಇದನ್ನೂ ಓದಿ: ಇಂದು ಒಂದೇ ದಿನ ರಾಜ್ಯದ 4 ಕಡೆ ಮೋದಿ ಸಮಾವೇಶ – ಎಲ್ಲೆಲ್ಲಿ ಎಷ್ಟು ಗಂಟೆಗೆ ಕಾರ್ಯಕ್ರಮ?

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Share This Article