ಉದ್ದೇಶಪೂರ್ವಕವಾಗಿಯೇ ಗುದ್ದಿ ಹತ್ಯೆ ಮಾಡಿದ್ದಾರೆ – ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ

Public TV
2 Min Read

– ವಾಲ್ನೂರಿನಲ್ಲಿ  ಮತಯಾಚನೆ ವೇಳೆ ಕಾರು ಡಿಕ್ಕಿ
– ಓರ್ವ ಕಾರ್ಯಕರ್ತ ಸಾವು, ಇಬ್ಬರು ಗಂಭೀರ

ಮಡಿಕೇರಿ: ಕುಶಾಲನಗರ ತಾಲೂಕಿನ  ವಾಲ್ನೂರಿನಲ್ಲಿ ಚುನಾವಣಾ ಪ್ರಚಾರ ನಿರತ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಯಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದಾರೆ.

ಅಪಘಾತದಲ್ಲಿ ರಾಮಪ್ಪ(60) ಮೃತಪಟ್ಟಿದ್ದು, ರತೀಶ(35), ಚಂದ್ರರಾಜ(55) ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಇಂದು ಮಡಿಕೇರಿ ಮತ್ತು ಸಿದ್ದಾಪುರ ರಸ್ತೆಯನ್ನು ಬಂದ್ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಬಂದ್ ಅದ ಹಿನ್ನೆಲೆಯಲ್ಲಿ ಸಿದ್ದಾಪುರ ಮಡಿಕೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು?

ಅಪಘಾತದಲ್ಲಿ ಮೃತಪಟ್ಟ ರಾಮಪ್ಪ
ಅಪಘಾತದಲ್ಲಿ ಮೃತಪಟ್ಟ ರಾಮಪ್ಪ

ಕೊಡಗು ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಮತ್ತು ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಅಪ್ಪಚ್ಚು ರಂಜನ್ ವಿರಾಜಪುಟ ತಾಲೂಕಿನ ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಿದ್ದಾಪುರ ಶವಾಗಾರ ರಸ್ತೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗುತ್ತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಲವ್‌ ಜಿಹಾದ್‌ಗೆ ಬಲಿಯಾಗಲ್ಲ ಅಂದ್ರೆ ಅವಳ ಕುತ್ತಿಗೆಗೆ ಚಾಕು ಹಾಕಿ ಸಾಯಿಸ್ತಾರೆ.. ಸರ್ಕಾರ ಮೂಕಪ್ರೇಕ್ಷಕನಂತಿರುತ್ತೆ: ಸಿ.ಟಿ.ರವಿ

ಸಿಟಿ ರವಿ ಕಿಡಿ:
ಬಿಜೆಪಿ ಪರ ಚುನಾವಣಾ ಪ್ರಚಾರ ಕೈಗೊಳ್ಳುತ್ತೀರಾ? ಅವರು ನಿಮ್ಮ ಮೇಲೆ ಕಾರು ಹರಿಸಿ ಸಾಯಿಸುತ್ತಾರೆ ಮತ್ತು ಎಲ್ಲರೂ ಮೌನವಾಗಿರುತ್ತಾರೆ. ನನಗಲ್ಲ ಎನ್ನುವ ಕಾಲ ಇದಲ್ಲ. ಪ್ರತಿಯೊಂದು ಬೆಳವಣಿಗೆಗೂ ನಮ್ಮ ಮೌನವು ಒಂದು ಕಾರಣ. ಇನ್ನಾದರೂ ಎದ್ದು ನಿಲ್ಲು ಹಿಂದು, ಸುಮ್ಮನಿದ್ದರೆ ದೇಶವೂ ಇರದು, ಜಾತಿಯು ಇರದು, ನಾನು ಇರೆನು, ನೀನು ಇರಲಾರೆ ಎಂದು ಸಿಟಿ ರವಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಕಿಡಿಕಾರಿದ್ದಾರೆ.

ಯುವಕರಿದ್ದ ಎಸ್ಟೀಮ್‌ ಕಾರು
ಯುವಕರಿದ್ದ ಎಸ್ಟೀಮ್‌ ಕಾರು

ಏನಿದು ಘಟನೆ?
ಗುರುವಾರ ಸಂಜೆ ಸಿದ್ದಾಪುರ ಕುಶಾಲನಗರ ಹೆದ್ದಾರಿ ನಡುವಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಲ್ನೂರು ತ್ಯಾಗತ್ತೂರಿನಲ್ಲಿ ಕೇಸರಿ ಶಾಲು, ಬಿಜೆಪಿ ಶಲ್ಯ ಧರಿಸಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಂಟಿಕೊಪ್ಪ ಕಂಬಿಬಾಣೆಯ ಯುವಕರ ತಂಡ ಎಸ್ಟೀಮ್ ಕಾರನ್ನು ವೇಗವಾಗಿ ಚಲಿಸಿ ರಸ್ತೆ ಬದಿಯಲ್ಲಿದ್ದ ಕಾರ್ಯಕರ್ತರ ಮೇಲೆ ಅಪಘಾತ ನಡೆಸಿ ಪರಾರಿಯಾಗಿದ್ದರು.

ಅಪಘಾತ ನಡೆದ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಬೆನ್ನಟ್ಟಿ ಕಾರನ್ನು ಅಡ್ಡಗಟ್ಟಿ ಶೌಖತ್‌ನನ್ನು ಹಿಡಿದು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಿನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ. ರಸ್ತೆ ಬದಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹರಿಸಿದ್ದು ಇದು ಅಚಾತುರ್ಯ ಚಾಲನೆಯೋ ಅಥವಾ ಉದ್ದೇಶಪೂರ್ವಕವಾಗಿ ಹತ್ಯೆಗೆ ಸಂಚು ಮಾಡಿದ್ದಾರಾ? ಈ ಆಯಾಮಗಳಲ್ಲಿ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ನಿಷೇಧಾಜ್ಞೆ ಜಾರಿ:
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್‌ 144 ರಡಿ ಕೊಡಗು ಜಿಲ್ಲೆಯ ಸಿದ್ದಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ಶುಕ್ರವಾರ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಜಾಥಾ, ರಸ್ತೆ ತಡೆ, ಪ್ರಚೋದಾನಾತ್ಮಕ ಹೇಳಿಕೆ, ಘೋಷಣೆ ಕೂಗತಕ್ಕದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Share This Article