ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ – ಆಯೋಗದಿಂದ ಕಠಿಣ ನಿಯಮ

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಸುಲಭವಾಗಿ ಸೆಳೆದು, ಮತ ಗಿಟ್ಟಿಸಿಕೊಳ್ಳಬಹುದು ಎಂದು ಯೋಚಿಸಿದವರಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ. ಸೋಷಿಯಲ್ ಮೀಡಿಯಾ ಮೂಲಕ ಮಾಡುವ ಪ್ರಚಾರಕ್ಕೆ, ಸುಳ್ಳು ಸುದ್ದಿಗಳಿಗೆ ಆಯೋಗ ಕೊಕ್ಕೆ ಹಾಕಿದೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಮ್ಮ ನಾಮಪತ್ರದಲ್ಲಿ ತಾವು ಹೊಂದಿರುವ ಸಾಮಾಜಿಕ ಜಾಲತಾಣದ ಖಾತೆಗಳ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು. ಜೊತೆಗೆ ತಮ್ಮ ಮೂಲಕ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ಎಲ್ಲ ಸೋಷಿಯಲ್ ಮೀಡಿಯಾಗಳು ಕಡ್ಡಾಯವಾಗಿ ಅಧಿಕಾರಿಗಳನ್ನು ನೇಮಿಸಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಸೇನೆ, ಸೈನಿಕರ ಚಿತ್ರಗಳನ್ನು ಬಳಸುವಂತಿಲ್ಲ: ರಾಜಕೀಯ ಪಕ್ಷಗಳಿಗೆ ಆಯೋಗ ಎಚ್ಚರಿಕೆ

ಆನ್‍ಲೈನ್ ಸಂಪರ್ಕ ಸೇವೆಗಳ ಸಂಬಂಧ ನೀತಿ ಸಂಹಿತೆ ಜಾರಿಯಾಗಲಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ರಾಜಕೀಯ ಜಾಹೀರಾತಿಗೆ ಪೂರ್ವ ದೃಢೀಕರಣ ಪಡೆಯುವುದು ಅಗತ್ಯವಾಗಿದೆ. ಗೂಗಲ್, ಫೇಸ್‍ಬುಕ್, ಟ್ವಿಟ್ಟರ್, ಯೂಟ್ಯೂಬ್‍ಗಳು ರಾಜಕೀಯ ಪಕ್ಷಗಳ ಜಾಹೀರಾತುಗಳನ್ನು ಪರಿಶೀಲಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದಕ್ಕೆ ವ್ಯಯಿಸುವ ಹಣವೂ ಚುನಾವಣಾ ಖರ್ಚು-ವೆಚ್ಚಗಳ ಮಿತಿಯ ವ್ಯಾಪ್ತಿಯಲ್ಲೇ ಬರಲಿದೆ.

ಲೋಕಸಭಾ ಚುನಾವಣೆ ಏಪ್ರಿಲ್ 11ರಿಂದ ಆರಂಭವಾಗಲಿರುವ ಚುನಾವಣಾ ಪ್ರಕ್ರಿಯೆ ಮೇ 23ರಂದು ಫಲಿತಾಂಶ ಪ್ರಕಟವಾಗುವ ಮೂಲಕ ಬರೋಬ್ಬರಿ ಒಂದೂವರೆ ತಿಂಗಳ ಕಾಲ ನಡೆಯಲಿದೆ. 29 ರಾಜ್ಯಗಳು 7 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಬರೋಬ್ಬರಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 18 ರಂದು 14 ಕ್ಷೇತ್ರಗಳಿಗೆ ಮತ್ತು ಏಪ್ರಿಲ್ 23ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *