Lok Sabha Election: ಈ ಬಾರಿ ಪ್ರತಾಪ್ ಸಿಂಹ ಅವ್ರನ್ನ ಗೆಲ್ಲಿಸಬೇಡಿ – ಸಿದ್ದರಾಮಯ್ಯ

By
1 Min Read

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ  (Pratap Simha) ಅವರನ್ನ ದಯವಿಟ್ಟು ಗೆಲ್ಲಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕರೆ ನೀಡಿದ್ದಾರೆ.

ಮೈಸೂರಿನ (Mysuru) ರಾಜೀವ್‌ನಗರದಲ್ಲಿ ನಡೆದ ಅಲ್ ಬದರ್ ಸರ್ಕಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿ (Narendra Modi) ಪ್ರಧಾನಿಯಾಗಿ 9 ವರ್ಷಗಳಾಯಿತು. ಇಷ್ಟು ವರ್ಷದಲ್ಲಿ ಅವರು ಬರೀ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದೂ ಮುಸ್ಲಿಂ, ಹಿಜಬ್, ಹಲಾಲ್ ಕಟ್ ವಿಚಾರಗಳನ್ನ ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯವನ್ನೇ ಹಾಳು ಮಾಡಿದ್ದಾರೆ. ಹೀಗಾಗಿ ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನ ಸಂಸತ್ತಿಗೆ ಆಯ್ಕೆ ಮಾಡಬೇಡಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

ಬಿಜೆಪಿಯವರು ಸಮಾಜ ವಿರೋಧಿ ಶಕ್ತಿಗಳು. ಮೋದಿ ಅವರು ಅಚ್ಚೆ ದಿನ್ ಅಂತ ಹೇಳುತ್ತಾರೆ. ಆದ್ರೆ ನಿಜವಾದ ಒಳ್ಳೆಯ ದಿನಗಳನ್ನು ನಾವು ತಂದು ಕೊಟ್ಟಿದ್ದೇವೆ. ಮುಂದಿನ ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಬರ ಘೋಷಣೆ ಬಗ್ಗೆ ತೀರ್ಮಾನ: ಸಿಎಂ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್