ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆ 2024 (Loksabha Elections 2024) ಈಗ ನಿಧಾನವಾಗಿ ಅಂತ್ಯದತ್ತ ಸಾಗುತ್ತಿದೆ. 20 ಮೇ 2024 ರವರೆಗೆ 5 ಹಂತದ ಚುನಾವಣೆಗಳಿಗೆ ಮತದಾನ ಪೂರ್ಣಗೊಂಡಿದೆ. ಒಂದೆಡೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟವು ನಿರಂತರವಾಗಿ 400ಕ್ಕೂ ಹೆಚ್ಚು ಸೀಟುಗಳನ್ನು ಪಡೆಯುತ್ತಿದೆ ಎಂದು ಹೇಳುತ್ತಿದ್ದರೆ, ಇತ್ತ ಕಾಂಗ್ರೆಸ್ (Congress) ಮತ್ತು I.N.D.I.A ಒಕ್ಕೂಟ ಈ ಬಾರಿ ತಾವು ಗೆಲುವು ಸಾಧಿಸುತ್ತೇವೆ ಎಂದು ಹೇಳಿಕೊಳ್ಳುತ್ತಿವೆ. ಈ ನಡುವೆ ಇದೀಗ ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Pramod Krishnam) ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ (Rahul Gandhi) ಮಹಾನ್ ವ್ಯಕ್ತಿಯಾಗಿದ್ದು, ಅವರು ಏನು ಬೇಕಾದರೂ ಹೇಳಬಲ್ಲರು. ರಾಹುಲ್ ಗಾಂಧಿ ಅವರಿಗೆ ದೊಡ್ಡ ನಮಸ್ಕಾರ. ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂದು ಕನಸು ಕಂಡಿದ್ದರು. ಬಿಜೆಪಿಯಿಂದಲೂ ಆ ಕೆಲಸ ಮಾಡಲಾಗಲಿಲ್ಲ. ಆದರೆ ಆ ಕೆಲಸವನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: General Elections 2024: ಕಣದಲ್ಲಿರೋ 1,600 ಕ್ಕೂ ಹೆಚ್ಚು ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ

ರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಇದು ನನಗೆ ಮಾತ್ರವಲ್ಲ ದೇಶಾದ್ಯಂತ ಇರುವ ಕೋಟ್ಯಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿದಿದೆ. ಜೂನ್ 4ರ ನಂತರ ಇಲ್ಲಿಯವರೆಗೂ ಅತಿ ಕಡಿಮೆ ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಲಿದೆ ಎಂದು ಪ್ರಮೋದ್ ಕೃಷ್ಣಂ ಭವಿಷ್ಯ ನುಡಿದಿದ್ದಾರೆ.

Share This Article