ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

By
1 Min Read

– ಜಮೀರ್ ಮನೆ ಖರೀದಿಗೆ ಸಾಲ ಕೊಟ್ಟಿದ್ದ ಉದ್ಯಮಿ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು (KGF Babu) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ (Lokayukta) ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್ ಬಾಬು ಮತ್ತು ಜಮೀರ್ ಅಹ್ಮದ್ ನಡುವೆ ಹಣದ ವ್ಯವಹಾರ ನಡೆದಿರೋದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಅವರಿಗೆ ನೋಟಿಸ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು, 7 ದಿನಗಳ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌

 ತನಿಖೆ ವೇಳೆ ಸಚಿವ ಜಮೀರ್ ಅಹ್ಮದ್‌ಗೆ ಕೆಜಿಎಫ್ ಬಾಬು ಅವರು 2013ರಲ್ಲಿ ಮನೆ ಖರೀದಿಗೆ 3.70 ಕೋಟಿ ರೂ. ಸಾಲ ನೀಡಿರುವುದು ತಿಳಿದುಬಂದಿದೆ. ಹಾಗಾಗಿ ಯಾವ ಕಾರಣಕ್ಕಾಗಿ ಹಣ ನೀಡಿದ್ದೀರಿ? ಇಬ್ಬರ ವ್ಯವಹಾರಗಳೇನು? ಈ ಸಂಬಂಧ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾನ್‌ಸ್ಟೆಬಲ್‌, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ

ಇದೇ ಪ್ರಕರಣದಲ್ಲಿ ಜಮೀರ್‌ಗೆ 2 ಕೋಟಿ ರೂ. ಸಾಲ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಅವರೂ ಕಳೆದ ವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದರು.

Share This Article