ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್

Public TV
1 Min Read

ಬೆಂಗಳೂರು: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ (Revenue Inspector) ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ ಈ ಮೊದಲೇ ಚೆಕ್‍ನಲ್ಲಿ 4 ಲಕ್ಷ ರೂ. ಹಣವನ್ನು ಚೆಕ್‍ನಲ್ಲಿ ಪಡೆದಿದ್ದ ಎಂದು ತಿಳಿದು ಬಂದಿದೆ. ಬುಧವಾರ ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್‍ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ನಗರ ಲೋಕಾಯುಕ್ತ ಎಸ್‍ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಜಮ್ಮುವಿನಲ್ಲಿ ಉಗ್ರನ ಬೇಟೆಯಾಡಿದ ಭಾರತೀಯ ಸೇನೆ

Share This Article