ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

Public TV
1 Min Read

– ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಪತ್ತೆ

ಮಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ (Mescom EE Shantakumar) ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು (Lokayukta Officer) ದಾಳಿ ನಡೆಸಿದ್ದಾರೆ.

ಮಂಗಳೂರಿನ ಅತ್ತಾವರ ವಿಭಾಗದದಲ್ಲಿ ಕಳೆದ ಐದೂವರೆ ವರ್ಷದಿಂದ ಇಲೆಕ್ಟ್ರಿಕಲ್ ಎಂಜಿನಿಯರ್ ಆಗಿರುವ ಶಾಂತಕುಮಾರ್ ಅಕ್ರಮ ಆಸ್ತಿಹೊಂದಿರೋ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ನಗರದ ಕೊಂಚಾಡಿಯಲ್ಲಿರುವ ಶಿವಪ್ರಸಾದ್ ಗೋಲ್ಡ್ ಅಪಾರ್ಟ್‍ಮೆಂಟ್ ನ ಮನೆಗೂ ಹಾಗೂ ಅತ್ತಾವರದಲ್ಲಿರುವ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಾಂತಕುಮಾರ್ ಅವರ ಬೆಂಗಳೂರಿನಲ್ಲಿರುವ ಮನೆಗೂ ಇದೇ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೂರು ಕಡೆಗಳಲ್ಲೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಬೇಕು: ಡಿಕೆಶಿ ಒತ್ತಾಯ

Share This Article