ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಗುರುವಾರ (ಇಂದು) ಸಹ ಲೋಕಾಯುಕ್ತ (Lokayukta) ದಾಳಿ ಮುಂದುವರಿದಿದೆ. ಕೆ.ಆರ್‌ಪುರಂ (K.R. Puram) ತಹಶೀಲ್ದಾರ್ (Tahsildar) ಅಜಿತ್ ರೈ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದ ಅಧಿಕಾರಿಗಳು, ರಾತ್ರಿ ಪೂರ್ತಿ ಸಹಕಾರ ನಗರದ ನಿವಾಸದಲ್ಲೇ ಮೊಕ್ಕಾಂ ಹೂಡಿದ್ದರು. ಇಂದು ಸಹ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. 2 ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ಅಜಿತ್ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 40 ಲಕ್ಷ ರೂ. ನಗದು ಸಹಿತ 1.90 ಕೋಟಿ ರೂ. ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ

ಅಲ್ಲದೇ 100 ಎಕರೆಗೂ ಅಧಿಕ ಆಸ್ತಿ ಸಂಬಂಧಿತ ದಾಖಲೆಗಳು ಪತ್ತೆಯಾಗಿವೆ. ಸಂಬಂಧಿಕರು ಹಾಗೂ ಸ್ನೇಹಿತರ ಹೆಸರಿನಲ್ಲಿ ಆಸ್ತಿ ಪತ್ರಗಳು ಸಿಕ್ಕಿದ್ದು, ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರದ ಬಳಿ 98 ಎಕರೆ ಹೊಂದಿರುವ ಭೂಮಿ ಪತ್ರ ಲಭ್ಯವಾಗಿದೆ. ಈ ಆಸ್ತಿಯ ಮೌಲ್ಯ 300 ಕೋಟಿ ರೂ. ಎನ್ನಲಾಗಿದೆ. ಈ ಜಾಗದಲ್ಲಿ ಹಾರ್ಸ್ ರೈಡಿಂಗ್ ಸ್ಕೂಲ್ ಮಾಡಲು ತಯಾರಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇದರ ಜೊತೆ ಕಲ್ಲೂರು ಬಳಿ 30 ಎಕರೆ ಜಮೀನು ಇರುವ ಬಗ್ಗೆ ಆಸ್ತಿ ಪತ್ರ ಪತ್ತೆಯಾಗಿದೆ.

ಇಂದು ಬ್ಯಾಂಕ್ ಸ್ಟೇಟ್‍ಮೆಂಟ್ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ನೂರಾರು ಎಕರೆ ಜಾಗದ ಪತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲ್ಯಾಂಡ್ ಕ್ರೂಜರ್, ಇನ್ನೋವಾ, ಫಾರ್ಚೂನರ್, ಮಿನಿ ಕೂಪರ್ ಕಾರು ಹಾಗೂ ಡುಕಾಟಿ ಸೇರಿ ಕೆಲ ಬೈಕ್‍ಗಳು ದಾಳಿ ವೇಳೆ ಪತ್ತೆಯಾಗಿವೆ. ವರ್ಷಕ್ಕೆ 1 ಕೋಟಿ ರೂ.ಗಳಿಗಿಂತಲೂ ಅಧಿಕ ಆದಾಯ ಹೊಂದಿರುವ ಅಜಿತ್ ರೈ ಆದಾಯಕ್ಕೂ ಮತ್ತು ದೊರೆತಿರುವ ಆಸ್ತಿಗೂ ಸಾಕಷ್ಟು ವ್ಯತ್ಯಾಸ ಇದೆ ಎಂದು ತಿಳಿದು ಬಂದಿದೆ.

ತಹಶೀಲ್ದಾರ್ ಅಜಿತ್ ರೈಗೆ ಸಂಬಂಧಿಸಿದ ಬ್ಯಾಂಕ್ ಅಕೌಂಟ್ ಫ್ರೀಜ್ ಮಾಡುವಂತೆ ಲೋಕಾಯುಕ್ತ ಅಧಿಕಾರಿಗಳು ಬ್ಯಾಂಕ್‍ಗೆ ಪತ್ರ ಬರೆದಿದ್ದಾರೆ. ದಾಳಿ ನಡೆದಿರುವ ಸ್ಥಳಕ್ಕೆ ಲೋಕಾಯುಕ್ತ ಎಸ್‍ಪಿ ಆಶೋಕ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಪತಿ ಅವಾಂತರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್