ಲಂಚ ಪಡೆದು ಲಾಕ್ ಆದ ಅಧಿಕಾರಿ – ಲೋಕಾ ದಾಳಿ ವೇಳೆ ಅಸ್ವಸ್ಥಗೊಂಡ ಸಿಬ್ಬಂದಿ!

Public TV
1 Min Read

ಬೆಳಗಾವಿ: ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ (Belagavi) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

ಇಲಾಖೆ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಿಗೇರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು. ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅಂಗನವಾಡಿ ಸಹಾಯಕಿಯಿಂದ ಅಧಿಕಾರಿಗಳು 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಆಗುತ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥರಾಗಿದ್ದು, ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಹಣ ಪಡೆದಿದ್ದ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share This Article