Loksabha Elections 2024- ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟ ಬಿಜೆಪಿ

Public TV
1 Min Read

ಬೆಂಗಳೂರು: ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು (Kolar Constituency) ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.

ಈ ಸಂಬಂಧ ಇಂದು ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ (Radha Mohandas Agarwal) ಘೋಷಣೆ ಮಾಡಿದ್ದಾರೆ. ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಜೆಡಿಎಸ್‍ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿ. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ತೀನಿ. ಪ್ರಧಾನಿ ಮೋದಿಗಾಗಿ (Narendra Modi) ಕೆಲಸ ಮಾಡಿ. ಮೂರು ಕ್ಷೇತ್ರದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ರೂ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್

ಬಿಜೆಪಿ 25 ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಜೆಡಿಎಸ್‍ಗೆ (JDS) ಮೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಅಭ್ಯರ್ಥಿ ಯಾರಾಗಾಬೇಕು ಅಂತ ನಾವು ಹಸ್ತಕ್ಷೇಪ ಮಾಡಿಲ್ಲ. ಆದರೆ ಒಟ್ಟಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಗಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾದ ವಿ. ಸುನೀಲ್ ಕುಮಾರ್ ಉಪಸ್ಥಿತಿತರಿದ್ದರು.

Share This Article