ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆಗೆ ಇಂದು ಚಾಲನೆ ಸಿಗಲಿದೆ.

ಇಂದಿನಿಂದ ನಾಮಪತ್ರ (Nomination) ಸಲ್ಲಿಕೆಗೆ ಅವಕಾಶವಿದ್ದು, ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ರಾಜ್ಯದ ಒಟ್ಟು 14 ಕ್ಷೇತ್ರದಲ್ಲಿ ಮೇ 7ಕ್ಕೆ ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತಾನ ನಡೆಯಲಿದೆ. ಇದನ್ನೂ ಓದಿ: ಬಾಲಕಿಯಿಂದ ವಿನೂತನವಾಗಿ ಮತದಾನ ಜಾಗೃತಿ- ಚುನಾವಣಾ ಆಯೋಗ ಪ್ರಶಂಸೆ

Share This Article