ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ – ಟ್ರಂಪ್‌ಗೆ ಮೋದಿ ಅಭಿನಂದನೆ

Public TV
1 Min Read

ನವದೆಹಲಿ: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂಧಿಸಿದ್ದಾರೆ.

ಈ ಸಂಬಂಧ ಭಾರತ-ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.


ಜನರ ಸುಧಾರಣೆಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಡೊನಾಲ್ಡ್‌ ಟ್ರಂಪ್‌ 31 ರಾಜ್ಯಗಳಲ್ಲಿ ಜಯಗಳಿಸಿದರೆ ಕಮಲಾ ಹ್ಯಾರಿಸ್‌ (Kamala Harris) 19 ರಾಜ್ಯಗಳಲ್ಲಿ ಜಯಗಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಟ್ರಂಪ್‌ಗೆ ಐತಿಹಾಸಿಕ ಗೆಲುವು

2020ರಲ್ಲಿ ಅಮೆರಿಕ ಚುನಾವಣೆ ನಡೆಯುವ ಎರಡು ತಿಂಗಳ ಮೊದಲು ಮೋದಿ ಅವರು ʼಹೌಡಿ ಮೋದಿʼ ಕಾಯಕ್ರಮದಲ್ಲಿ ಭಾಗಿಯಾಗಿ ಟ್ರಂಪ್‌ ಪರ ಬ್ಯಾಟ್‌ ಬೀಸಿದ್ದರು. ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ಆಯೋಜಿಸಿದ್ದ ಈ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿತ್ತು.

Share This Article