ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಹೈಕೋರ್ಟ್ ಆದೇಶ

Public TV
1 Min Read

ಚಂಡೀಗಢ: 90ರ ದಶಕದಲ್ಲಿ ಭಯೋತ್ಪಾದಕರಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸುವಂತೆ ಹರಿಯಾಣ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

1947ರಲ್ಲಿ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಭಾರತದ ಸರ್ಕಾರ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಇದೇ ವಿಧಾನ ಅಳವಡಿಸಿಕೊಳ್ಳಬಹುದು ಎಂದು ನ್ಯಾಯಮೂರ್ತಿಗಳಾದ ಅಮೋಲ್ ರತ್ತನ್ ಸಿಂಗ್ ಮತ್ತು ಲಲಿತ್ ಬಾತ್ರಾ ಅವರಿದ್ದ ಪೀಠ ಸಲಹೆ ನೀಡಿದೆ. ಇದನ್ನೂ ಓದಿ: ದಂಪತಿ ಒಟ್ಟಿಗೆ ಮಲಗುವಂತಿಲ್ಲ, ಹಗ್‌-ಕಿಸ್‌ ಮಾಡುವಂತಿಲ್ಲ; ಕೊರೊನಾ ಟಫ್‌ ರೂಲ್ಸ್‌

haryana

ಭಯೋತ್ಪಾದನೆಯಿಂದಾಗಿ ಕಾಶ್ಮೀರದಲ್ಲಿ ತಮ್ಮ ಪೂರ್ವಜರ ಮನೆಗಳಿಂದ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಹರಿಯಾಣ ಸರ್ಕಾರ ಇದೇ ದೃಷ್ಟಿಕೋನದಲ್ಲಿ ಸಮಸ್ಯೆ ಪರಿಶೀಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರ ವಸತಿಗಾಗಿ ನಿವೇಶನ ಹಂಚಿಕೆ ಸಂಬಂಧ ಸಲ್ಲಿಸಿದ್ದ ಅರ್ಜಿಯಲ್ಲಿ, ಏಪ್ರಿಲ್ 6 ರಂದು ನಡೆಯಲಿರುವ ಲಾ ಡ್ರಾಗೆ (ಚೀಟಿ ಎತ್ತುವಿಕೆ) ತಡೆಯಾಜ್ಞೆ ನೀಡುವಂತೆಯೂ ಕೋರಲಾಗಿತ್ತು. ಆದರೆ ಲಾಟ್ ಡ್ರಾಗೆ ತಡೆ ನೀಡದ ನ್ಯಾಯಾಲಯ ಜಮ್ಮು-ಕಾಶ್ಮೀರದಿಂದ ಸ್ಥಳಾಂತರಗೊಂಡಿರುವ ಎಲ್ಲರನ್ನೂ ಅದರಲ್ಲಿ ಒಳಗೊಳ್ಳಬೇಕು ಎಂದು ಸೂಚಿಸಿದೆ.

Share This Article
Leave a Comment

Leave a Reply

Your email address will not be published. Required fields are marked *