ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

1 Min Read

ದಾವಣಗೆರೆ: ಲಾರಿ ಹರಿದು (Accident) ಪಾದಾಚಾರಿ ಸಾವಿಗೆ ಕಾರಣನಾಗಿದ್ದ ಚಾಲಕನನ್ನು 32 ವರ್ಷಗಳ ಬಳಿಕ ಜಗಳೂರು (Jagalur) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಗಂಗಾಧರಪ್ಪ (67) ಎಂದು ಗುರುತಿಸಲಾಗಿದೆ. ಈತ 1994ರಲ್ಲಿ ಕಲ್ಲೇದೇವಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಎಸಗಿದ್ದ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಸಾವನ್ನಪ್ಪಿದ್ದರು. ಅಪಘಾತದ ಬಳಿಕ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ಚಾಲಕನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು | ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ

ಇನ್ಸ್‌ಪೆಕ್ಟರ್ ಸಿದ್ದರಾಮಯ್ಯ ಹಾಗೂ ಎಸ್ಐ ವೆಂಕಟೇಶ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿ, ಜಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೋರ್ಟ್‌ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR

Share This Article