ಲಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ಜಖಂ- ಮೂವರ ದುರ್ಮರಣ

By
1 Min Read

ತುಮಕೂರು: ಕಾರು ಲಾರಿಗೆ (Car- Lorry Accident) ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

ಆಕಾಶ್ (20) ಹೇಮಂತ್ (28) ಶಿವಕುಮಾರ್ ಮೃತ ದುರ್ದೈವಿಗಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ

ಕಾರು (Car) ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದರೆ, ಲಾರಿ (Lorry) ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ.

ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್