ಉಡುಪಿ| ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ ಲಾರಿ

1 Min Read

ಉಡುಪಿ: ಆಕಸ್ಮಿಕ ಬೆಂಕಿಯಿಂದ ಲಾರಿ ಸುಟ್ಟು ಕರಕಲಾಗಿರುವ ಘಟನೆ ಬೈಂದೂರಿನ ಉಪ್ಪುಂದ ಬಿಜೂರು ರಾಷ್ಟ್ರೀಯ ಹೆದ್ದಾರಿ 66 ಸೇತುವೆ ಬಳಿ ನಡೆದಿದೆ.

ಧಾರವಾಡದಿಂದ ಕುಂದಾಪುರಕ್ಕೆ ಲಾರಿ ತೆರಳುತ್ತಿತ್ತು. ಪಶು ಆಹಾರ ಸಾಗಾಟ ಮಾಡುತ್ತಿದ್ದ ಲಾರಿಯ ಹಿಂಬದಿಯ ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ರಾಜ್ಯದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್

ಲಾರಿಯಲ್ಲಿದ್ದ ಪಶು ಆಹಾರ ಬೆಂಕಿಗಾಹುತಿಯಾಗಿದೆ. ಲಾರಿ ಚಾಲಕ ಚಂದ್ರಕಾಂತ್ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹೊತ್ತಿ ಉರಿಯುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.

ಅಗ್ನಿಶಾಮಕ ವಾಹನ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಸಾರ್ವಜನಿಕರ ಸಹಕಾರದಿಂದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Share This Article