ಸರ್ಕಾರಿ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ

Public TV
0 Min Read

ಮಡಿಕೇರಿ: ಸರ್ಕಾರಿ ಬಸ್ಸಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

ಈ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. 10-15 ಪ್ರಯಾಣಿಕರಿದ್ದ ಬಸ್ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಇತ್ತ ಮಂಗಳೂರಿನಿಂದ ಮೈಸೂರು ಕಡೆ ಕೊಕೊ ಸಾಗಿಸುತ್ತಿದ್ದ ಲಾರಿ ಸಂಚರಿಸುತ್ತಿತ್ತು. ಈ ವೇಳೆ ಬಸ್ ನ ಹಿಂಬದಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಸ್ ಗೆ ಡಿಕ್ಕಿಯಾದ ಬಳಿಕ ಲಾರಿ ರಸ್ತೆ ಬದಿ ಪಲ್ಟಿಯಾಗಿದೆ.

ಘಟನೆಯಿಂದ ಬಸ್‍ನಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *