ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಇಬ್ಬರ ದುರ್ಮರಣ

Public TV
1 Min Read

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು (Lorry) ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavara) ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.

ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಭಾಗದಿಂದ ಹೊನ್ನಾವರ ಕಡೆ ಬರುತಿತ್ತು. ಅತಿ ವೇಗದ ಚಾಲನೆಯೇ ಲಾರಿ ಪಲ್ಟಿಯಾಗಲು ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದನ್ನೂ ಓದಿ: ಇಬ್ಬರು ಮಕ್ಕಳನ್ನು ಹತ್ಯೆಗೈದು ಬೆಂಗಳೂರಿನ ಟೆಕ್ಕಿ, ಪತ್ನಿ ಆತ್ಮಹತ್ಯೆ

ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರದವರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟ – ತೀವ್ರತೆಗೆ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರ

Share This Article