2028 Olympics | 128 ವರ್ಷಗಳ ಬಳಿಕ ಕ್ರಿಕೆಟ್‌ – ಒಲಿಂಪಿಕ್ಸ್‌ನಲ್ಲಿ 6 ತಂಡಗಳ ಸ್ಪರ್ಧೆ

Public TV
2 Min Read

ಮುಂಬೈ/ವಾಷಿಂಗ್ಟನ್‌: 128 ವರ್ಷಗಳ ಬಳಿಕ ಒಲಿಂಪಿಕ್ಸ್‌ (Olympics) ಕ್ರೀಡಾಕೂಟಕ್ಕೆ ಕ್ರಿಕೆಟ್‌ ಮರಳಿದ್ದು, 2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧೆ ಮಾಡಲಿವೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC) ಖಚಿತಪಡಿಸಿದೆ. ಆದ್ರೆ ಯಾವ ತಂಡಗಳು ಎಂಬ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಟಿ20 ಫಾರ್ಮ್ಯಾಟ್‌ನಲ್ಲಿ ಒಲಿಂಪಿಕ್ಸ್‌ ಕ್ರಿಕೆಟ್‌ (T20 Farmat Cricket) ಕ್ರೀಡಾಕೂಟ ನಡೆಯಲಿದ್ದು, ಒಂದು ತಂಡದಲ್ಲಿ 15 ಆಟಗಾರರನ್ನು ಒಳಗೊಂಡಿರಲಿದೆ. ಆತಿಥೇಯರಾಗಿ, USA ಪಂದ್ಯಾವಳಿಗೆ ನೇರ ಪ್ರವೇಶ ಪಡೆಯಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: IPL 2025 | ಜಿಟಿ ವಿರುದ್ಧ ಸೋಲಿನ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರೂ. ದಂಡ

ಇತ್ತೀಚೆಗೆ ಸ್ಕ್ವಾಷ್, ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್/ಸಾಫ್ಟ್‌ಬಾಲ್ ಮತ್ತು ಲ್ಯಾಕ್ರೋಸ್ ಜೊತೆಗೆ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಸೇರಿಸಲಾದ 5 ಹೊಸ ಕ್ರೀಡೆಗಳಲ್ಲಿ ಕ್ರಿಕೆಟ್ ಒಂದಾಗಿದೆ. ಆದ್ರೆ ಟೆಸ್ಟ್‌, ಏಕದಿನ ಕ್ರಿಕೆಟ್‌ಗಿಂತಲೂ ಟಿ20 ಕ್ರಿಕೆಟ್‌ ವಿಭಿನ್ನವಾಗಿದೆ. ಸುಮಾರು 100 ರಾಷ್ಟ್ರಗಳು ಕ್ರಿಕೆಟ್‌ ಆಡುತ್ತವೆ. ಹೀಗಾಗಿ ಒಲಿಂಪಿಕ್ಸ್‌ ಕ್ರಿಕೆಟ್‌ (Olympics Cricket) ಟಿ20 ಮಾದರಿಯಲ್ಲಿ ನಡೆಯಲಿದೆ ಐಒಸಿ ತಿಳಿಸಿದೆ. ಆದ್ರೆ ಕ್ರಿಕೆಟ್‌ಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು ಇನ್ನಷ್ಟೇ ನಿಗದಿಯಾಗಬೇಕಿದೆ.

2028ರ ಒಲಿಂಪಿಕ್ಸ್‌ ಕ್ರೀಡಾಕೂಟವು 351 ಪದಕ ಕ್ರೀಡೆಗಳನ್ನು ಒಳಗೊಂಡಿರಲಿದೆ. 10,500 ಅಥ್ಲಿಟ್‌ಗಳು ಪಾಲ್ಗೊಳ್ಳಲಿದ್ದಾರೆ, ಜೊತೆಗೆ 5 ಹೊಸ ಕ್ರೀಡೆಗಳಿಂದ ಹೆಚ್ಚುವರಿ 698 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: IPL 2025 – ಜಿಯೋದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಚಿತ ಇಂಟರ್ನೆಟ್

ಈ ಹಿಂದೆ 1990ರ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್‌ ಸೇರ್ಪಡೆಯಾಗಿತ್ತು. ಆಗ ಇಂಗ್ಲೆಂಡ್​-ಫ್ರಾನ್ಸ್​ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಒಂದು ಭಾಗವಾಗಿತ್ತು. ಅಲ್ಲದೇ 2023ರಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ 9 ಮಹಿಳಾ ತಂಡಗಳು ಮತ್ತು 14 ಪುರುಷರ ತಂಡಗಳು ಕ್ರಿಕೆಟ್‌ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಟೀಂ ಇಂಡಿಯಾ ಎರಡೂ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿತ್ತು. ಇದನ್ನೂ ಓದಿ: ಐಪಿಎಲ್ 2025: ಪಂಜಾಬ್ ಆಲ್‌ರೌಂಡರ್ ಮ್ಯಾಕ್ಸ್‌ವೆಲ್‌ಗೆ ಪಂದ್ಯದ 25% ದಂಡ

Share This Article