‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ

Public TV
1 Min Read

ವ್‌ ಮಾಕ್ಟೇಲ್‌ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ಮಿಲನಾ ನಾಗರಾಜ್‌ ಹಾಗೂ ಅಮೃತಾ ಅಯ್ಯಂಗಾರ್‌ ಒಟ್ಟಿಗೆ ನಟಿಸಿದ್ದ ಓ ಸಾರಥಿ ಮಹೇಶ್‌ ಸಿ.ಅಮ್ಮಳ್ಳಿದೊಡ್ಡಿ (Mahesh C. Ammallidoddy) ಸದ್ದಿಲ್ಲದೆ ‘ಲವ್’ (Love) ಎಂಬ ಹೊಸ ಸಿನಿಮಾ ಶುರು ಮಾಡಿದ್ದಾರೆ. ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ.

ಕಣ್ಮಣಿ ಎಂಬ ಮಧುರಪ್ರೇಮ ಗೀತೆ (Song) ಇದಾಗಿದ್ದು, ನಿರ್ದೇಶಕ ಮಹೇಶ್ ಪದಪುಂಜ ಪೋಣಿಸಿರುವ ಹಾಡಿಗೆ ರೋಸಿತ್ ವಿಜಯನ್ ಧ್ವನಿಯಾಗಿರುವುದರ ಜೊತೆಗೆ ಸಾಯಿ ಕಿರಣ್ ಜೊತೆಯಾಗಿ ಸಂಗೀತ ನಿರ್ದೇಶಿಸಿದ್ದಾರೆ. ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಣ್ಮಣಿ ಸಿಂಗಿಂಗ್ ಮಸ್ತಿಯಲ್ಲಿ ಕಾಣಿಸಿಕೊಂಡಿದ್ದಾರೆ.

‘ಲವ್’ ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆಯುಳ್ಳ ಸಿನಿಮಾ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ (Prajay Jayaram) ಹಾಗೂ ವೃಷ ಪಾಟೀಲ (Vrisha Patil) ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ ಹಲವರು ಚಿತ್ರದ ಭಾಗವಾಗಿದ್ದಾರೆ. ಇದನ್ನೂ ಓದಿ:ಕಾಲಿವುಡ್ ಸ್ಟಾರ್ ಕಾಮಿಡಿಯನ್‌ಗೆ ಸಾಧು ಕೋಕಿಲ ಪುತ್ರ ಆ್ಯಕ್ಷನ್ ಕಟ್

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ನೈಜ ಘಟನೆಯಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ,‌ ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್