ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ರಾಧಿಕಾ ಪಂಡಿತ್ (Radhika Pandit) ಸ್ಯಾಂಡಲ್‌ವುಡ್ ಮುದ್ದಾದ ಜೋಡಿಗಳಲ್ಲಿ ಒಂದು. ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬಂದ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಅದರಲ್ಲೂ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನಿಮಾವಂತೂ ಪ್ರೇಕ್ಷಕರ ಗಮನ ಸೆಳೆದಿತ್ತು. ಹೀಗೆ ಒಟ್ಟೊಟ್ಟಿಗೆ ಸಿನಿಮಾ ಮಾಡುತ್ತಿದ್ದ ಈ ಜೋಡಿ ಪ್ರೀತಿಯಲ್ಲಿ ಬಿದ್ದಿತ್ತು. ಪ್ರೀತಿ ಮದುವೆ ಹಂತ ತಲುಪಿತ್ತು. ಯಶ್ ರಾಧಿಕಾ ಪಂಡಿತ್ ನಿಶ್ಚಿತಾರ್ಥವಾಗಿ ಇಂದಿಗೆ (ಆ.12) ಭರ್ತಿ 9 ವರ್ಷವಾಗಿದೆ. ಈ ನೆನಪುಗಳನ್ನು ನಟಿ ರಾಧಿಕಾ ಪಂಡಿತ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಅಂದಹಾಗೆ ಆಗಸ್ಟ್ 12, 2016 ರಲ್ಲಿ ಗೋವಾದಲ್ಲಿ (Goa) ಅದ್ಧೂರಿಯಾಗಿ ನಿಶ್ಚಿತಾರ್ಥ (Engagement) ನೆರವೇರಿತ್ತು. ನಂತರ ಆ ವರ್ಷದ ಡಿಸೆಂಬರ್‌ನಲ್ಲಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಯಶ್ ರಾಧಿಕಾ ಹಸೆಮಣೆ ಏರಿದ್ದರು. ನಂತರ ಮೈಸೂರು ಪ್ಯಾಲೇಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದರು. ಇದೀಗ 9 ವರ್ಷಗಳ ಹಿಂದಿನ ನೆನಪಿಗೆ ಜಾರಿದೆ ರಾಕಿಂಗ್ ಜೋಡಿ. ಇದನ್ನೂ ಓದಿ: `ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
ಯಶ್ ಸದ್ಯ ಟಾಕ್ಸಿಕ್ (Toxic) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ರಾಮಾಯಣ ಸಿನಿಮಾದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿರುವ ಯಶ್ ನ್ಯಾಷನಲ್ ಸ್ಟಾರ್ ಆಗಿ ಬೆಳೆದಿದ್ದಾರೆ. ಕೆಜಿಎಫ್ ಪಾರ್ಟ್ ನಂತರ ತೆರೆಗೆ ಬರಲಿರುವ ಟಾಕ್ಸಿಕ್ ಸಿನಿಮಾ ಮೇಲೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.