ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!

2 Min Read

ಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ (Darling Krishna) ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು. ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ 3 (Love Mocktail 3) ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ, ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಮೂರನೇ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು. ಇದನ್ನೂ ಓದಿ: ಗಿಲ್ಲಿ ಬೇಜವಾಬ್ದಾರಿ ಪರ್ಸನ್‌, ಪಕ್ಷಪಾತಿ – ಕ್ಯಾಪ್ಟನ್ಸಿ ಬಗ್ಗೆ ಕಿಚ್ಚನ ಮುಂದೆ ಮನೆ ಮಂದಿ ದೂರು!

ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಷಿಸಿದ್ದಾರೆ. ಇದರೊಂದಿಗೆ ಲವ್ ಮಾಕ್ಟೇಲ್ 3 ಪ್ರೇಕ್ಷಕರ ಮುಂದೆ ಬರಲು ಇದೇ ಏಪ್ರಿಲ್ 10ರಂದು ಮುಹೂರ್ತ ನಿಗಧಿಯಾದಂತಾಗಿದೆ. 2020ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ತೆರೆಗಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ, ಲವ್ ಮಾಕ್ಟೇಲ್ 2 ಚಿತ್ರವನ್ನು ಕೃಷ್ಣ ರೂಪಿಸಿದ್ದರು.

ಇದೀಗ ತೆರೆಗಾಣಲು ಸಜ್ಜಾಗಿರುವ ಲವ್ ಮಾಕ್ಟೇಲ್ 3 ಈ ಹಿಂದಿನ ಎರಡು ಆವೃತ್ತಿಗಳಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್ ಮಾಕ್ಟೇಲ್ 3 ಹೊಸ ಅನುಭೂತಿ ಕೊಡಲಿದೆ ಎಂಬ ಭರವಸೆ ಕೃಷ್ಣ ಅವರದ್ದು.

ಈ ಚಿತ್ರವನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ (Milana Nagaraj) ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ, ಮುಂತಾದವರ ತಾರಾಗಣವಿದೆ. ಇದೀಗ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ, ಬೇಸಿಗೆ ರಜೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 10 ರಂದು ಪ್ರೇಕ್ಷಕರ ಮುಂದೆ ಬರಲು ತೀರ್ಮಾನಿಸಿದೆ. ಇದನ್ನೂ ಓದಿ: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ – ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ದೈವ ನರ್ತಕರ ಆಕ್ರೋಶ

Share This Article