ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ

1 Min Read

ಲವ್‌ ಯೂ ಮುದ್ದು, ಸಿದ್ದು ಮೂಲಿಮನಿ, ರೇಷ್ಮಾ, Love U Muddu, Title Track, Siddhu Moolimani, Reshma ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಖ್ಯಾತಿಯ ಕುಮಾರ್ ಸಾರಥ್ಯದ ಹೊಸ ಸಿನಿಮಾ ಲವ್ ಯು ಮುದ್ದು (Love U Muddu) ಈಗಾಗಲೇ ಟೈಟಲ್ ಮೂಲಕವೇ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಈ ಚಿತ್ರದ ಟೈಟಲ್ ಟ್ರ‍್ಯಾಕ್ ಬಿಡುಗಡೆಯಾಗಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಲವ್ ಯು ಮುದ್ದು ಚಿತ್ರದ ಮೆಲೋಡಿ ಗೀತೆ ರಿಲೀಸ್ ಆಗಿದೆ. ಅನಿರುದ್ಧ್ ಶಾಸ್ತ್ರೀ ಸಾಹಿತ್ಯ ಬರೆದು ಸಂಗೀತ ನೀಡಿರುವ ಹಾಡಿಗೆ ಸೋನು ನಿಗಮ್, ಐಶ್ವರ್ಯಾ ರಂಗರಾಜನ್ ಹಾಗೂ ಸುರಭಿ ಭಾರದ್ವಾಜ್ ಕಂಠ ಕುಣಿಸಿದ್ದಾರೆ. ಲವ್ ಯು ಮುದ್ದು ಅಂತಾ ನಾಯಕ ಸಿದ್ದು ಕುಣಿದಿದ್ದು, ನಾಯಕಿ ರೇಷ್ಮಾ ಹಾಡಿನಲ್ಲಿ ಮಿಂಚಿದ್ದಾರೆ.

ಲವ್ ಯು ಮುದ್ದು ಮಹಾರಾಷ್ಟ್ರದಲ್ಲಿ ನಡೆದ ನೈಜ ಪ್ರೇಮ ಕಥಾ ಹಂದರ ಒಳಗೊಂಡಿದೆ. ಕಿರುತೆರೆ ಮತ್ತು ಅಜ್ಞಾತವಾಸಿ ಸಿನಿಮಾ ಖ್ಯಾತಿಯ ಸಿದ್ದು(Siddhu Moolimani) ನಾಯಕನಾಗಿ, ಯುವನಟಿ ರೇಷ್ಮಾ (Reshma) ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಉಷಾ ಚಿತ್ರದಲ್ಲಿದ್ದಾರೆ. ಇದನ್ನೂ ಓದಿ: ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ

 

ಕಿಶನ್ ಎಂಟರ್ಟೈನ್ಮೆಂಟ್ ಬ್ಯಾನರ್‌ ಅಡಿ ಕಿಶನ್ ಟಿಎನ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ ಟಿಎಸ್ ಜೊತೆಯಾಗಿ ನಿಂತಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿಎಸ್ ದೀಪು ಸಂಕಲನ ಚಿತ್ರಕ್ಕಿದೆ. ಇದನ್ನೂ ಓದಿ: ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ

ಲವ್ ಯು ಮುದ್ದು ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕಾರ್ಕಳ, ಕುಮಟಾ, ಬೆಂಗಳೂರು ಸುತ್ತಮುತ್ತ 45 ದಿನಗಳ ಶೂಟಿಂಗ್ ನಡೆಸಲಾಗಿದೆ. ಕಮರ್ಷಿಯಲ್ ಜೊತೆಗೆ ಕಾಮಿಡಿ ಸಿನಿಮಾ ಮಾಡ್ತಿದ್ದ ಕುಮಾರ್ ಮೊದಲ ಬಾರಿಗೆ ಪ್ರೇಕ್ಷಕರ ಎದುರು ಪ್ರೇಮಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ.

Share This Article