Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

Public TV
2 Min Read

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ (T20 WorldCup) ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ (Virat Kohli), ಪಾಕಿಸ್ತಾನ (Pakistan) ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

 

View this post on Instagram

 

A post shared by AnushkaSharma1588 (@anushkasharma)

ಈ ಇನಿಂಗ್ಸ್ ಬಗ್ಗೆ ಕೊಹ್ಲಿ ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ಬಳಿಕ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿರುವ ಅನುಷ್ಕಾ, ನೀನು ಈ ರಾತ್ರಿ ಜನರಲ್ಲಿ ಸಾಕಷ್ಟು ಸಂತಸವನ್ನು ತಂದಿರುವೆ. ಅದೂ ದೀಪಾವಳಿ ಮುನ್ನಾದಿನ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!

`ನೀನು ನನ್ನ ಅದ್ಭುತ. ನಿನ್ನ ಸ್ಥೈರ್ಯ, ತ್ಯಾಗ ಮತ್ತು ವಿಶ್ವಾಸ ಎಂತಹವರನ್ನೂ ಚಕಿತಗೊಳಿಸುತ್ತದೆ. ನಾನು ನನ್ನ ಜೀವನದಲ್ಲೇ ಅತ್ಯುತ್ತಮ ಪಂದ್ಯವನ್ನು ನೋಡಿದೆ ಎಂದು ಹೇಳಬಲ್ಲೆ. ತನ್ನ ತಾಯಿ ಏಕೆ ರೂಮಿನಲ್ಲಿ ಕುಣಿದಾಡುತ್ತಿದ್ದಾಳೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನಮ್ಮ ಮಗಳು ಇನ್ನೂ ಚಿಕ್ಕವಳು. ಆದರೆ ಆ ರಾತ್ರಿ ಅವಳ ಅಪ್ಪ ಅತ್ಯಂತ ಕಠಿಣ ಸಂದರ್ಭದಲ್ಲಿ, ತನ್ನ ಮೇಲೆ ಅಪಾರ ಹೊರೆ ಇದ್ದಾಗಲೂ ಇಂದೆಂದಿಗಿಂತ ಹೆಚ್ಚು ಪ್ರಬಲವಾಗಿ ಮತ್ತು ಪ್ರಬುದ್ಧವಾಗಿ ಸವಾಲನ್ನು ಮೀರಿ ಹೊರ ಬಂದಿದ್ದರು. ವೃತ್ತಿ ಜೀವನದ ಅತ್ಯುತ್ತಮ ಇನಿಂಗ್ಸ್ ಆಡಿದ್ದರು ಎಂಬುದನ್ನು ಮುಂದೊಂದು ದಿನ ಅರ್ಥ ಮಾಡಿಕೊಳ್ಳುತ್ತಾಳೆ. ನಾನು ತುಂಬಾ ಹೆಮ್ಮೆ ಪಡುತ್ತಿದ್ದೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ಪ್ರತಿಯೊಂದು ಕ್ಷಣದಲ್ಲೂ ನನ್ನ ಜೊತೆಗೆ ಇದ್ದುದ್ದಕ್ಕಾಗಿ ನನ್ನ ಪ್ರೀತಿಗೆ ಧನ್ಯವಾದಗಳು. ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

ಮೆಲ್ಬರ್ನ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಇಂಡೋ ಪಾಕ್ ಕದನದಲ್ಲಿ 20 ಓವರ್‌ಗಳಲ್ಲಿ ಪಾಕಿಸ್ತಾನ 8 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿ, ಭಾರತಕ್ಕೆ 160 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಗೆಲುವು ಸಾಧಿಸಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *