ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಸುದ್ದಿ ಕೇಳಿ ಶಾಕ್‌ ಆಯ್ತು: ಪ್ರೇಮ್

Public TV
1 Min Read

ನ್ನಡ ಚಲನಚಿತ್ರ ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Soundarya Jagadeesh) ಅವರು ತಮ್ಮ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಇಂದು (ಏ.14) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಅವರು ಜಗದೀಶ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸೌಂದರ್ಯ ಜಗದೀಶ್ ಆತ್ಮಹತ್ಯೆ ಸುದ್ದಿ ಕೇಳಿ ಶಾಕ್‌ ಆಯ್ತು ಎಂದಿದ್ದಾರೆ. ಇದನ್ನೂ ಓದಿ:ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ಗುಂಡಿನ ದಾಳಿ

ಸೌಂದರ್ಯ ಜಗದೀಶ್‌ಗೆ ಏನಾಯ್ತು ಎಂಬುದು ನನಗೆ ಗೊತ್ತಿಲ್ಲ. ಒಂದು ಅಪರೂಪದ ಸ್ನೇಹ ನಾವು ಕಳೆದುಕೊಂಡು ಬಿಟ್ಟಿದ್ದೇವೆ. ಯಾರೇ ಸಹಾಯ ಕೇಳಿದ್ರು ಇಲ್ಲ ಎಂದು ಹೇಳುತ್ತಿರಲಿಲ್ಲ. ಇತ್ತೀಚೆಗೆ ಅವರ ಮನೆಯ ಡ್ರೈವರ್ ತೀರಿಕೊಂಡಿದ್ದರು. ಅವರ ಅತ್ತೆ ಕೂಡ ಇತ್ತೀಚೆಗೆ ನಿಧನರಾದರು. ಈಗ ಸೌಂದರ್ಯ ಜಗದೀಶ್ ಆತ್ಮಹತ್ಯೆಯ ಸುದ್ದಿ ಕೇಳಿ ಶಾಕ್ ಆಯ್ತು ಎಂದು ನಟ ಪ್ರೇಮ್ ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ಮಗಳ ಮದುವೆ ಅದ್ಧೂರಿಯಾಗಿ ಮಾಡಿದ್ದರು. ಖುಷಿ ಖುಷಿಯಾಗಿ ಇದ್ದರು. ಎಲ್ಲರನ್ನೂ ಕರೆದು ಪಾರ್ಟಿ ಮಾಡಿದ್ದರು. ಅವರಿಗೆ ಆರ್ಥಿಕ ಸಮಸ್ಯೆ ಏನು ಇರಲಿಲ್ಲ. ಒಂದು ಅಪರೂಪದ ಸ್ನೇಹವನ್ನು ನಾವೆಲ್ಲರೂ ಕಳೆದುಕೊಂಡಿದ್ದೇವೆ. ಅವರ ಕುಟುಂಬಕ್ಕೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ಕೊಡಲಿ. ಜಗದೀಶ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟ ಪ್ರೇಮ್ ಸಂತಾಪ ಸೂಚಿಸಿದ್ದಾರೆ.

Share This Article