ಪ್ರಿಯತಮೆಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡಿದ್ದ ಪಾಗಲ್ ಪ್ರೇಮಿ ಸಾವು

Public TV
1 Min Read

ಬಾಗಲಕೋಟೆ: ಪ್ರೀತಿ (Love) ಮಾಡಲು ಒಲ್ಲೆ ಎಂದ ಯುವತಿಗೆ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿದ್ದಲ್ಲದೇ ತಾನೂ ಬೆಂಕಿ ಹಚ್ಚಿಕೊಂಡಿದ್ದ ವಿಕೃತ ಪ್ರೇಮಿ ಮೃತಪಟ್ಟ ಘಟನೆ ಬಾಗಲಕೋಟೆಯಲ್ಲಿ (Bagalkote) ನಡೆದಿದೆ.

ಇಲಕಲ್‌ನ ಗುಡೂರಿನಲ್ಲಿ ಈ ಘಟನೆ ನಡೆದಿದ್ದು, ಅಫ್ಜಲ್ ಸೊಲ್ಲಾಪುರ (27) ಮೃತ ಆರೋಪಿ. ಈತ ನೇತ್ರಾವತಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ನೇತ್ರಾವತಿಗೆ ಬೇರೊಂದು ಹುಡುಗನ ಜೊತೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ತಾಳ್ಮೆ ಕಳೆದುಕೊಂಡ ಅಫ್ಜಲ್ ನೇತ್ರಾಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ತಾನೂ ಪೆಟ್ರೋಲ್ ಸುರಿದುಕೊಂಡು ಬೆಂಕಿ (Fire) ಹಚ್ಚಿಕೊಂಡಿದ್ದಾನೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ 

ಅಫ್ಜಲ್‌ನನ್ನು ಹುಬ್ಬಳ್ಳಿಯ (Hubballi) ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಿದ್ದು, ನೇತ್ರಾವತಿಯನ್ನು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ (Distrcit Hospital) ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅಫ್ಜಲ್ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬಣ್ಣದ ಮಾತುಗಳಿಂದ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಮದುವೆಯಾಗಿದ್ದ ಶಿಕ್ಷಕ ಅರೆಸ್ಟ್ 

ಈ ಕುರಿತು ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು

Share This Article