ಮದುವೆಗೆ ನಿರಾಕರಿಸಿದ ಪ್ರಿಯಕರ – ಮನನೊಂದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ

Public TV
1 Min Read

ಹಾಸನ: ಪ್ರಿಯಕರ (Lovers) ಮದುವೆ ನಿರಾಕರಿಸಿದ್ದಕ್ಕೆ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ, ಶಾಂತಿಗ್ರಾಮ (ShantiGrama) ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ, ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿ. ಹಾಸನದ (Hassan) ಗೋಕುಲದಾಸ್ ಗಾರ್ಮೆಂಟ್ಸ್ ಕೆಲಸಕ್ಕೆ ಬರುತ್ತಿದ್ದ ಅಮೃತ ಹಿರಿಸಾವೆ ಹೋಬಳಿ, ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಇಬ್ಬರ ಪ್ರೀತಿಯ ವಿಚಾರ 2 ತಿಂಗಳ ಹಿಂದೆ ಅಮೃತ ಪೋಷಕರಿಗೆ ತಿಳಿದಿದ್ದು, ಮಾ.11 ರಂದು ದಿಲೀಪ್‌ನನ್ನು ಯುವತಿಯ ಮನೆಗೆ ಬರಲು ಹೇಳಿದ್ದರು. ಆದರೆ ದಿಲೀಪ್ ನುಗ್ಗೇಹಳ್ಳಿಯಲ್ಲಿ ಅಮೃತಳಾನ್ನು ಭೇಟಿಯಾಗಿ, ಮದುವೆಯಾಗಲು ಸಾಧ್ಯವಿಲ್ಲ. ನನಗೂ ನಿನಗೂ ಸಂಬಂಧವಿಲ್ಲ. ನಮ್ಮಿಬ್ಬರ ಜಾತಿ ಬೇರೆ-ಬೇರೆ ಎಂದು ಏರುಧ್ವನಿಯಲ್ಲಿ ಹೇಳಿ ಅಲ್ಲಿಂದ ವಾಪಸ್ಸಾಗಿದ್ದಾನೆ. ಇದನ್ನೂ ಓದಿ: Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ ಕಸರತ್ತು!

ನಂತರ ಅಮೃತ ಕೆಲಸಕ್ಕಾಗಿ ಹಾಸನದ ಬಸ್ ಹತ್ತಿ ಬಂದಿದ್ದರು. ಅಲ್ಲಿಂದ ತಾನು ಕೆಲಸಕ್ಕೆ ಬರುವುದಿಲ್ಲ ಎಂದು ಸ್ನೇಹಿತೆಗೆ ತಿಳಿಸಿ ಶಾಂತಿಗ್ರಾಮದಲ್ಲಿ ಬಸ್ ಇಳಿದಿದ್ದರು. ಸಂಜೆ ಅಮೃತ ಮನೆ ಬಾರದೇ ಫೋನ್ ಸಹ ಸಂಪರ್ಕಕ್ಕೆ ಸಿಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ನುಗ್ಗೇಹಳ್ಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಗುರುವಾರ ಶಾಂತಿಗ್ರಾಮ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಪ್ರೀತಿ ಕೈಕೊಟ್ಟ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪಿ ದಿಲೀಪ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಹಲ್ಲೆ- ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ

Share This Article