ಯಲಹಂಕ ಲಾಡ್ಜ್‌ನಲ್ಲಿ ಅಗ್ನಿ ದುರಂತ – ಪೆಟ್ರೋಲ್ ಸುರಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

Public TV
1 Min Read

– ಮನೆಯಲ್ಲಿ ಪ್ರೀತಿಗೆ ಒಪ್ಪದಿದ್ದಕ್ಕೆ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಬೆಂಗಳೂರು: ಇಲ್ಲಿನ ಯಲಹಂಕ ನ್ಯೂ ಟೌನ್ (Yelahanka Lodge New Town) ವ್ಯಾಪ್ತಿಯಲ್ಲಿಂದು ಮಧ್ಯಾಹ್ನ ನಡೆದ ದಾರುಣ ಘಟನೆಯೊಂದು ನಡೆದಿದೆ. ಪ್ರೇಮಿಗಳಿಬ್ಬರು ಲಾಡ್ಜ್‌ನಲ್ಲಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರೇಮಿಗಳು (Lovers) ಸಜೀವ ದಹನವಾಗಿದ್ದಾರೆ. ಘಟನೆ ಸ್ಥಳೀಯರನ್ನ ಬೆಚ್ಚಿ ಬೀಳುವಂತೆ ಮಾಡಿದೆ.

ಪ್ರೀತಿಗೆ ಮನೆಯವರ ವಿರೋಧ
ಅಗ್ನಿ ದುರಂತದಲ್ಲಿ ಮೃತಪಟ್ಟ ಪ್ರೇಮಿಗಳಿಬ್ಬರು ಕೆಲಸ ಮಾಡ್ತಿದ್ದರು. ಯುವಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಯುವತಿ ಸ್ಪಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಇವರಿಬ್ಬರಿಗೂ ಹಲವು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಆದರೆ ಮನೆಯವರಿಂದ ಈ ಸಂಬಂಧಕ್ಕೆ ಒಪ್ಪಿಗೆ ಸಿಗದ ಹಿನ್ನೆಲೆ ಸಾವಿನ ನಿರ್ಧಾರ ಕೈಗೊಂಡರು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಇಂದು ಮಧ್ಯಾಹ್ನ ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ (Yelahanka New Town Police Station) ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿರುವ ಲಾಡ್ಜ್‌ಗೆ ಬಂದಿದ್ದರು. ಲಾಡ್ಜ್‌ನಲ್ಲಿ ಕೊಠಡಿ ಪಡೆದ ಕೆಲವೇ ಸಮಯದಲ್ಲಿ, ಪೆಟ್ರೋಲ್ ತಂದು ತಮ್ಮ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಯುವಕ ಮತ್ತು ಯುವತಿ ಚೀರಾಡಿದ ಧ್ವನಿ ಕೇಳಿ ಲಾಡ್ಜ್ ಸಿಬ್ಬಂದಿ ದೌಡಾಯಿಸಿದ್ದಾರೆ. ತಕ್ಷಣ ಅಲ್ಲಿನ ಸಿಬ್ಬಂದಿ ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ನಂತರ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಉಸಿರುಗಟ್ಟಿ ಯುವತಿ ಸಾವು
ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆದ ವೇಳೆ ರಮೇಶ್ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದು, ಯುವತಿ ಕಾವೇರಿ ಉಸಿರುಗಟ್ಡಿ ಸಾವನ್ನಪ್ಪಿರೋದು ಗೊತ್ತಾಗಿದೆ. ಇವರಿಬ್ಬರು ಪ್ರೇಮಿಗಳು ಅನ್ನೋ ಶಂಕೆ ಕೂಡ ವ್ಯಕ್ತವಾಗಿದೆ. ಇಬ್ಬರ ನಡುವೆ ಜಗಳ ನಡೆದು ರಮೇಶ್ ಪೆಟ್ರೋಲ್ ಸುರಿದುಕೊಂಡು ಯುವತಿಗೂ ಪೆಟ್ರೋಲ್ ಸುರಿಯೋಕೆ ಯತ್ನಿಸಿದ್ದಾನೆ.

ಈ ವೇಳೆ ಯುವತಿ ಬಾತ್ ರೂಂ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆಗ ರಮೇಶ್ ತಾನು ಬೆಂಕಿ ಹಚ್ಚಿಕೊಂಡು ಬಾತ್ ರೂಂ ಬಾಗಿಲಿಗೂ ಪೆಟ್ರೋಲ್ ಸುರಿದು ಬೆಂಕಿ‌ಹಾಕಿದ್ದಾನೆ. ಅದರಿಂದಲೇ ಲಾಡ್ಜ್ ಪೂರ್ತಿ ಬೆಂಕಿ ಅವರಿಸಿಕೊಂಡಿದೆ ಅನ್ನೋ ಶಂಕೆ ವ್ಯಕ್ತವಾಗಿದೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಆತ್ಮಹತ್ಯೆ ನಾ ಅಥವಾ ಬೆಂಕಿಯ ಅವಘಡ ದಿಂದ ನಡೆದಿದ್ಯಾ ಅನ್ನೋದು ಗೊತ್ತಾಗಬೇಕಿದೆ.

Share This Article