ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಜೋಡಿಯ ನಡುವೆ ಮಾತಿನ ಚಕಮಕಿ ನಡೆದು, ಯುವಕ ಚಾಕುವಿನಿಂದ ಇರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ ಸಂಭವಿಸಿದೆ.
ಪ್ರಭ (28 ವರ್ಷ) ಹಲ್ಲೆಗೊಳಗಾದ ಪ್ರೀಯತಮೆಯಾಗಿದ್ದಾಳೆ. ಈಕೆ ಮೈಸೂರು ಮೂಲದವಳಾಗಿದ್ದು, ನಗರದ ಸರ್ಕಾರಿ ಸಾರ್ವಜನಿಕ ತಾಯಿ ಮಗು ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಇದೇ ಆಸ್ಪತ್ರೆಯಲ್ಲಿ ಅಕೌಂಟೆಂಟ್ ಸ್ಟಾಪ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗಿರೀಶ್ (32 ವರ್ಷ) ಚಾಕುವಿನಿಂದ ಇರಿದಿರುವ ಆರೋಪಿಯಾಗಿದ್ದಾನೆ.
ನಡೆದಿದ್ದೇನು?: ಪ್ರಭ ಮತ್ತು ಗಿರೀಶ್ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಎರಡು ಮನೆಯ ಕಡೆ ಮದುವೆಯ ಮಾತುಕತೆ ನಡೆದು ನಿಶ್ಚಿತಾರ್ಥದ ಸಿದ್ಧತೆ ನಡೆಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅದರೆ ಗಿರೀಶ್ ಯಾಕೆ ಚಾಕು ಇರಿದ ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪವರ್ ಫುಲ್ ಜೇಮ್ಸ್ ಟೀಸರ್ ಔಟ್ – ಅಪ್ಪು ಎಂಟ್ರಿಗೆ ಅಭಿಮಾನಿಗಳು ಫಿದಾ
ಇಂದು ಬೆಳಗ್ಗೆ ಯುವತಿಯ ಮನೆಯಲ್ಲಿ ಘಟನೆ ನಡೆದಿದ್ದು, ರಕ್ತದ ನಡುವಿನಲ್ಲಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಆರೋಪಿ ಗಿರೀಶ್ ಪೊಲೀಸರಿಗೆ ಶರಣಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.