ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ

Public TV
1 Min Read

ಕಲಬುರಗಿ: ವಿಷ (Poison) ಸೇವಿಸಿ ಪ್ರೇಮಿಗಳಿಬ್ಬರು (Lovers) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ಚೌಕಿ ತಾಂಡಾದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದನ್ನೂ ಓದಿ: ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣ – ರಾಗಿ ಮುದ್ದೆಗೆ ಸೈನೈಡ್ ಬೆರೆಸಿದ್ದೆ ಎಂದ ಪತಿರಾಯ!

ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ತಲೆಗೆ ಕಬ್ಬಿಣದ ರಾಡ್‍ನಿಂದ ಹೊಡೆದು ಹತ್ಯೆಗೈದ ಪತಿ

Share This Article