ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ

Public TV
2 Min Read

ಟರಾಕ್ಷಸ ಡಾಲಿ ಧನಂಜಯ್ (Dhananjay)  ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ  ‘ಟಗರು ಪಲ್ಯ’ (Tagaru Palya). ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ (Amrita Prem) ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: Exclusive: ಸ್ಪಂದನಾ ಇಲ್ಲ ಅನ್ನೋ ರಾಘು ನೋವು ಮಾಯ ಆಗಲ್ಲ- ನವೀನ್ ಕೃಷ್ಣ ಭಾವುಕ 

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.

‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್  ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್