ಲಕ್ಷದ್ವೀಪ ಸಮೀಪ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

Public TV
1 Min Read

– ಉಡುಪಿ ಜಿಲ್ಲೆಗೆ ಹೈ ಅಲರ್ಟ್‌; ಮೀನುಗಾರಿಕೆಯ ತೆರಳಿದ್ದ ಬೋಟ್‌ಗಳೆಲ್ಲ ವಾಪಸ್

ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಕರ್ನಾಟಕ ಕರಾವಳಿಯ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದೆ.

ಉಡುಪಿ (Udupi) ಜಿಲ್ಲೆಯ ಮಲ್ಪೆ ಸರ್ವ ಋತು ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಎಲ್ಲ ಬೋಟುಗಳು ವಾಪಸ್ ಆಗಿವೆ. ರಾಜ್ಯದ ಗಡಿ ದಾಟಿ ಗೋವಾ, ಮಹಾರಾಷ್ಟ್ರ ಗುಜರಾತ್ ಬಾರ್ಡರ್‌ನಲ್ಲಿ ಇರುವ ಬೋಟ್‌ಗಳಿಗೆ ಹತ್ತಿರದ ಬಂದರುಗಳನ್ನು ಆಶ್ರಯಿಸುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ

ಉಡುಪಿಯ ಬೋಟ್‌ಗಳು ಗೋವಾ, ಮಹಾರಾಷ್ಟ್ರ, ಗುಜರಾತ್ ಬಂದರು ಸೇರಿವೆ. ಮಲ್ಪೆ, ಗಂಗೊಳ್ಳಿ, ಕುಂದಾಪುರದ ಸಾವಿರಾರು ಬೋಟ್‌ಗಳು ವಾಪಸ್ ಆಗಿವೆ. ಚಂಡಮಾರುತವು ಕಡಲ ತೀರದಿಂದ ಸುಮಾರು 300 ಕಿಲೋಮೀಟರ್ ದೂರದಲ್ಲಿದೆ.

ಅರಬ್ಬೀ ಕಡಲ ತೀರದ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚರ ನೀಡಲಾಗಿದೆ. 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಳಸಮುದ್ರ, ಪರ್ಶಿಯನ್, ಟ್ರಾಲ್, ನಾಡದೋಣಿಗಳು ಲಂಗರು ಹಾಕಿವೆ. ಇದನ್ನೂ ಓದಿ: ಕರಾವಳಿಯಲ್ಲಿ ಅಬ್ಬರದ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ

Share This Article