ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

Public TV
1 Min Read

ನವದೆಹಲಿ: ಅಡುಗೆ ಅನಿಲ ದರವನ್ನು ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ (LPG cylinder prices hike) ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ.

‘ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಳವು ಉಜ್ವಲ ಫಲಾನುಭವಿಗಳು ಮತ್ತು ಉಜ್ವಲೇತರ ಫಲಾನುಭವಿಗಳಿಗೆ ಅನ್ವಯಿಸುತ್ತದೆ. ಇದನ್ನು ಪ್ರತಿ 15 ದಿನಗಳಿಗೊಮ್ಮೆ ಅಥವಾ ಒಂದು ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆʼ ಎಂದು ಮಾಹಿತಿ ನೀಡಿದ್ದಾರೆ.

ಅನಿಲ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳವಾಗಲಿದೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ – ಗ್ರಾಹಕರಿಗೆ ಯಾವುದೇ ಹೊರೆ ಇಲ್ಲ 

LPG

ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗುತ್ತಾ?

Share This Article