ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

Public TV
2 Min Read

– ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಕೆಪಿಸಿಸಿ ವಕ್ತಾರ

ಮಡಿಕೇರಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ (Vote Rigging) ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ (M Lakshman) ಆರೋಪಿಸಿದ್ದಾರೆ.

ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನಲ್ಲಿ (Bengaluru) ರಾಹುಲ್‌ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು (Mysuru Kodagu) ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ. ಇದನ್ನೂ ಓದಿ: ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 23 ಲಕ್ಷ ಮತದಾರರಿದ್ದು, 8 ವಿಧಾನಸಭಾ ಕ್ಷೇತ್ರಗಳಲ್ಲಿ 2,202 ಮತಗಟ್ಟೆಗಳಿವೆ. ಬೂತ್‌ ವಾರು ವಿಶ್ಲೇಷಣೆ ಮಾಡಿ ಪಟ್ಟಿ ಮಾಡಲಾಗಿದ್ದು, 292 ಮತಗಟ್ಟೆಗಳಲ್ಲಿ ಇವಿಎಂ ರಿಗ್ಗಿಂಗ್ ನಡೆದಿರುವ ಬಗ್ಗೆ ದಾಖಲೆ ಸಂಗ್ರಹಿಸಲಾಗಿದೆ. ಮೈಸೂರಿನ ಚಾಮರಾಜ, ಕೃಷ್ಣರಾಜ, ಮಡಿಕೇರಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 1,45,616 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್‌ 27,522 ಹಾಗೂ ಬಿಜೆಪಿಗೆ 1,18,094 ಮತ ಬಂದಿವೆ. 2018, 2023ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆ ಶೇ 40ಕ್ಕಿಂತ ಹೆಚ್ಚು ಮತಗಳು ಬಂದಿದ್ದವು. ಆದರೆ, 2024ರ ಚುನಾವಣೆಯಲ್ಲಿ ಶೇ 10ಕ್ಕಿಂತಲೂ ಕಡಿಮೆ ಮತಗಳು ಮಾತ್ರ ಬಂದಿರುವುದು ಮತಗಳವು ಆಗಿರೋದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಗ್ರಾಮವೊಂದರ ಬೂತ್‌ ನಲ್ಲಿ 750 ಮತ ಚಲಾವಣೆಯಾಗಿದ್ದು, 15 ಮನೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ. ಕನಿಷ್ಠ 50 ಮತಗಳಾದರೂ ಬರಬೇಕಿತ್ತು. ಆದ್ರೆ ಬಂದಿದ್ದು 7 ಮತ ಮಾತ್ರ. ನರಸಿಂಹರಾಜ ಕ್ಷೇತ್ರದ ಶಾಂತಿನಗರದಲ್ಲಿ ಒಂದೇ ಸಮುದಾಯ ಮಾತ್ರವೇ ಇದೆ. 700 ಮತಗಳಲ್ಲಿ 500 ಕಾಂಗ್ರೆಸ್‌ಗೆ ಮತ್ತು ಬಿಜೆಪಿಗೆ 200 ಮತ ಸಿಕ್ಕಿವೆ. ಇಲ್ಲಿ ಬಿಜೆಪಿಗೆ ಒಂದೇ ಒಂದೂ ವೋಟು ಸಿಗುವ ಅವಕಾಶ ಇಲ್ಲ. ಜೊತೆಗೆ 700 ಮತದಾರರಿದ್ದರೂ 750 ಮತಗಳು ಚಲಾವಣೆಯಾಗಿವೆ. ಈವೆಲ್ಲವೂ ಮತ ಕಳವು ಆಗಿರುವುದಕ್ಕೆ ಸ್ಪಷ್ಟ ನಿದರ್ಶನ ಎಂದು ಅರೋಪಿಸಿದ್ರು. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

ಧರ್ಮಸ್ಥಳ ಕೇಸ್‌; ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಞ್ಮಣ್‌, ದೂರುದಾರ ಕೋರ್ಟ್‌ನಲ್ಲಿ ನೇರವಾಗಿ ಹೇಳಿಕೆ ನೀಡಿದ್ದಾರೆ. ಅದರ ಆಧಾರದ ಮೇಲೆ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿದೆ. ತನಿಖೆಯೇ ಮಾಡಬಾರದು ಅಂದ್ರೆ ಹೇಗೆ? ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರ 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವ ಕೆಲಸವನ್ನು ಸರ್ಕಾರ ಮಾಡೇ ಮಾಡುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

Share This Article