ನಾಲ್ಕು ಮರಕ್ಕೆ ಗುಂಡು ಹಾರಿಸಿ, ಸರ್ಜಿಕಲ್ ಸ್ಟ್ರೈಕ್‌ ಅಂತಾ ಬಿಜೆಪಿ ಬಿಂಬಿಸಿತ್ತು: ಎಂ.ಲಕ್ಷ್ಮಣ್‌

Public TV
1 Min Read

– ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ; `ಕೈ’ ವಕ್ತಾರ

ಮೈಸೂರು: ನಾಲ್ಕು ಮರಕ್ಕೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಅಂತಾ ಬಿಜೆಪಿ ಬಿಂಬಿಸಿತ್ತು ಎಂದು ಕಾಂಗ್ರೆಸ್ (Congress) ವಕ್ತಾರ ಎಂ.ಲಕ್ಷ್ಮಣ್‌ ಹೇಳಿದರು.

ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಪಹಲ್ಗಾಮ್‌ನಲ್ಲಿ (Pahalgam) ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು (Muslims) ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಇದನ್ನೂ ಓದಿ: ಭಟ್ಕಳದಲ್ಲಿ 14 ಜನ ಪಾಕಿಸ್ತಾನಿ ಪ್ರಜೆಗಳು – ಸದ್ಯಕ್ಕಿಲ್ಲ ಗಡಿಪಾರು

ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದರು.

Share This Article