ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

1 Min Read

– ಆಪ್ಷನ್ಸ್ ದಾಖಲಿಸಲು ಫೆ.25 ಕೊನೆ ದಿನ

ಬೆಂಗಳೂರು: ಎಂ.ಫಾರ್ಮಾ (M.Pharma) ಕೋರ್ಸ್ ಪ್ರವೇಶಕ್ಕೆ ಎರಡನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಫೆ.25ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

ಫೆ.25ರಂದು ಸಂಜೆ 8ಗಂಟೆ ನಂತರ ತಾತ್ಕಾಲಿಕ ಹಾಗೂ ಫೆ.26ರಂದು ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

ಸೀಟು ಹಂಚಿಕೆಯಾದವರು ಫೆ.27ರಿಂದ ಮಾರ್ಚ್ 4ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರಗಳನ್ನು ಪಡೆಯಬೇಕು. ಮಾರ್ಚ್ 5ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದಿರುವ ಹಾಗೂ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳು (Upgradation) ಎರಡನೇ ಸುತ್ತಿನಲ್ಲಿ ಲಭ್ಯವಾಗುವ ಸೀಟುಗಳಿಗೆ ಆಪ್ಷನ್ಸ್ ದಾಖಲಿಸಬಹುದು. ವಿವರಗಳಿಗೆ ಕೆಇಎ ವೆಬ್‌ಸೈಟ್ ನೋಡಬೇಕು ಎಂದಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Share This Article