ನಾನು ಯಾರ ಸಂಪರ್ಕದಲ್ಲೂ ಇಲ್ಲ, ಬಿಜೆಪಿ ಸಂಪರ್ಕದಲ್ಲಿದ್ದೇನೆ: ಎಂಟಿಬಿ ನಾಗರಾಜ್

Public TV
1 Min Read

ಚಿಕ್ಕಬಳ್ಳಾಪುರ: ನಾನು ಯಾರ ಸಂಪರ್ಕದಲ್ಲೂ ಇಲ್ಲ. ನಾನು ಬಿಜೆಪಿಯವರ ಸಂಪರ್ಕದಲ್ಲಿದ್ದೇನೆ ಎಂದು ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

73 ನೇ ಗಣರಾಜೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನೂತನ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಧ್ವಜಾರೋಹಣ ನೇವೇರಿಸಿದರು. ಇದನ್ನೂ ಓದಿ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

MTB Nagaraj

ತದನಂತರ ಮಾತನಾಡಿದ ಅವರು, ಸಿಎಂ ಹಾಗೂ ಕೇಂದ್ರದ ವರಿಷ್ಠರ ಸೂಚನೆಯಂತೆ ಜಿಲ್ಲಾ ಉಸ್ತುವಾರಿಗಳ ಬದಲಾವಣೆ ಮಾಡಲಾಗಿದೆ. ತವರು ಜಿಲ್ಲೆಯ ಸಚಿವರಿಗೆ ಆಯಾ ಜಿಲ್ಲೆಯ ಉಸ್ತುವಾರಿ ಕೊಟ್ಟಿಲ್ಲ. ನಾನು ಸಹ ಸಂತೋಷದಿಂದಲೇ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸ್ಥಾನ ಒಪ್ಪಿಕೊಂಡಿದ್ದೇನೆ. ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ಹೇಳುವ ಹಾಗೆ ನಾನು ಯಾರ ಸಂಪರ್ಕದಲ್ಲೂ ಇಲ್ಲ. ನಾನು ಬಿಜೆಪಿಯವರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

MTB Nagaraj

ಡಿ.ಕೆ. ಶಿವಕುಮಾರ್ ಎದುರಿಗೆ ಸಿಕ್ಕಾಗ ಕೈ ಕುಲುಕತ್ತೇವೆ. ಸಿದ್ದರಾಮಯ್ಯ ವರ್ಗಾವಣೆ ಇದ್ದಾಗ ಕೆರೆ ಮಾಡಿ ಮಾತನಾಡುತ್ತಾರೆ. ರಾಜಕಾರಣವೇ ಬೇರೆ ಸ್ನೇಹ ಸಂಬಂಧವೇ ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ

Share This Article
Leave a Comment

Leave a Reply

Your email address will not be published. Required fields are marked *