ಶಿವಮೊಗ್ಗ: ಶಿಕ್ಷಣ ಸಚಿವರ ಸ್ವಗ್ರಾಮ ಕುಬಟೂರಿನಲ್ಲಿ ಪ್ರತಿಷ್ಠಾಪಿಸಿರುವ 16 ಅಡಿ ಎತ್ತರದ ಗಣೇಶ ಮೂರ್ತಿಗೆ ಮಧು ಬಂಗಾರಪ್ಪ (Madhu Bangarappa)ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮಸ್ಥರು ಜೊತೆ ಗಣೇಶನ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಂಡರು.
ಈ ಗಣೇಶನನ್ನು (Ganesha) ರಾಜಧಾನಿ ಬೆಂಗಳೂರಿನಿಂದ (Bengaluru) ಬರಮಾಡಿಕೊಳ್ಳಲಾಗಿದ್ದು, ಸೊರಬ (Sorab) ತಾಲೂಕಿನಲ್ಲಿಯೇ ಇದು ಅತೀ ಎತ್ತರದ ಗಣೇಶ ಮೂರ್ತಿಯಾಗಿದೆ. ಈ ಎತ್ತರದ ಗಣಪ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ
ಸಾವಿರಾರು ರೂಪಾಯಿ ವೆಚ್ಚದಲ್ಲಿ ಆಕರ್ಷಕವಾಗಿ ನಿರ್ಮಿಸಿರುವ ಮಂಟಪದಲ್ಲಿ, ರಾಜಗಾಂಭೀರ್ಯದಿಂದ ಸಿಂಹಾಸನದ ಮೇಲೆ ಕೂತು, ವಿವಿಧ ಕಲಾಕೃತಿಗಳಿಂದ ಕಂಗೊಳಿಸುತ್ತಿರುವ ಈ ಗಣೇಶನನ್ನು ನೋಡಲು ಅಕ್ಕ- ಪಕ್ಕದ ತಾಲೂಕು ಹಾಗೂ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಇಡೀ ಗ್ರಾಮದ ಜನರು ಎಲ್ಲ ಜಾತಿ, ಜನಾಂಗದವರು ಪಾಲ್ಗೊಂಡು ಒಟ್ಟಿಗೆ ಸೇರಿ ಸಂತೋಷದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಭಕ್ತಾದಿಗಳ ಅಪೇಕ್ಷೆಯಂತೆ ಇನ್ನೂ ಸ್ವಲ್ಪ ದಿನಗಳ ಕಾಲ ಗಣೇಶನನ್ನು ಪೂಜಿಸಿ, ಸೆಪ್ಟೆಂಬರ್ 12 ರಂದು ಅನ್ನ ಸಂತರ್ಪಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೆಪ್ಟೆಂಬರ್ 13 ವಿವಿಧ ಸಾಂಸ್ಕೃತಿಕ ಮೆರವಣಿಗೆಗಳೊಂದಿಗೆ “ಕುಬಟೂರು ಮಹಾರಾಜ” ಗಣೇಶನನ್ನು ವಿಸರ್ಜಿಸಲಿದ್ದಾರೆ ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸ್ತಿದ್ದಾನೆ – ಎಂ.ಬಿ ಪಾಟೀಲ್