ಮತಾಂತರ, ಮದುವೆ ಆಗಲು ನಿರಾಕರಿಸಿದ್ದಕ್ಕೆ ಹರಿಯಿತು ನೆತ್ತರು – ಹಿಂದೂ ಮಹಿಳೆಯ ಕ್ರೂರ ಹತ್ಯೆ

Public TV
1 Min Read

ಭೋಪಾಲ್‌: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು (Conversion) ಹಾಗೂ ತನ್ನನ್ನ ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 35 ವರ್ಷದ ಮಹಿಳೆಯ ಕತ್ತು ಸೀಳಿ ಕ್ರೂರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಭಾಗ್ಯಶ್ರೀ ನಾಮದೇವ್ ಧನುಕ್ (35 ಕೊಲೆಯಾದ ಮಹಿಳೆ) ಶೇಖ್ ರಯೀಸ್ (42) ಕೊಲೆಗೈದ ಆರೋಪಿ. ಮಹಿಳೆಯ ಗಂಟಲು ಕತ್ತರಿಸಿ, ಹಲವು ಬಾರಿ ಇರಿದಿದ್ದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕೃತ್ಯ ಎಸಗಿದ ಕೆಲವೇ ಗಂಟೆಗಳಲ್ಲಿ ಪೊಲೀಸರು (Madhya Pradesh Police) ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್‌ ಬಹುತೇಕ ಮುಳುಗಡೆ

ಕೊಲೆಯಾದ ಮಹಿಳೆಯ ಸಹೋದರಿ ಗಂಭೀರ ಆರೋಪ
ಕೊಲೆಯಾದ ಮಹಿಳೆಯ ಸಹೋದರಿ ಗಂಭೀರ ಆರೋಪ ಮಾಡಿದ್ದಾರೆ. ರಯೀಸ್ ಆಕೆಯ ಕೂದಲನ್ನ ಹಿಡಿದು, ಹಲ್ಲೆ ನಡೆಸುತ್ತಿದ್ದ. ಅಲ್ಲದೇ ಬಹಳ ದಿನಗಳಿಂದ ನನ್ನ ಅಕ್ಕನಿಗೆ ಕಿರುಕುಳ ನೀಡುತ್ತಿದ್ದ, ತನ್ನನ್ನು ಮದುವೆಯಾಗುವಂತೆ ಹಾಗೂ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರುತ್ತಿದ್ದ. ನನ್ನ ಸಹೋದರಿ ನಿರಾಕರಿದಿದ್ದಕ್ಕೆ ಮನೆಗೆ ನುಗ್ಗಿ ಆಕೆಯ ಕುತ್ತಿಗೆ ಸೀಳಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್‌ ಕೊಟ್ರಾ ಡಿಕೆಶಿ?

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬುರ್ಹಾನ್‌ಪುರ್ ಹೆಚ್ಚುವರಿ ಎಸ್ಪಿ ಅಂತರ್‌ ಸಿಂಗ್ ಕನೇಶ್, ಆರೋಪಿಯ ವಿರುದ್ಧ ಕೊಲೆ ಮತ್ತು ದೌರ್ಜನ್ಯ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್‌ ಕೊಟ್ರಾ ಡಿಕೆಶಿ?

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇನ್ನೂ ಈ ಘಟನೆ ಹಿಂದೂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಮುಖಂಡರು ಇದೊಂದು ಲವ್‌ ಜಿಹಾದ್‌ ಪ್ರಕರಣ, ಪೊಲೀಸರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆರೋಪಿಯನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.

Share This Article