ಲೋಕಾಯುಕ್ತ ಬಲೆಗೆ ಸಿಕ್ಕಿ ಬೀಳುತ್ತಲೇ 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಅಧಿಕಾರಿ

Public TV
1 Min Read

ಭೋಪಾಲ್: ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದ ಕಂದಾಯ ಇಲಾಖೆಯ ಅಧಿಕಾರಿ ಗಜೇಂದ್ರ ಸಿಂಗ್ ಲಂಚದ ಹಣವನ್ನು ಜಗಿದು ನುಂಗಿರುವ ವ್ಯಕ್ತಿ. ಭೂ ಪ್ರಕರಣದ ದೂರುದಾರರಾದ ಚಂದನ್ ಸಿಂಗ್ ಲೋಧಿ ಅವರಿಗೆ ಗಜೇಂದ್ರ ಸಿಂಗ್ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಲೋಧಿ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿದ ಜಬಲ್ಪುರದ ಲೋಕಾಯುಕ್ತ ಪೊಲೀಸರ ತಂಡ ಗಜೇಂದ್ರ ಸಿಂಗ್ ಖಾಸಗಿ ಕಚೇರಿಗೆ ತಲುಪಿದೆ. ಗಜೇಂದ್ರ ಸಿಂಗ್ ಲೋಧಿ ಅವರಿಂದ ಲಂಚವನ್ನು ಸ್ವೀಕರಿಸುತ್ತಲೇ ದಾಳಿ ನಡೆಸಿ ಕಂದಾಯ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆದರೆ ಈ ವೇಳೆ ಗಜೇಂದ್ರ ಸಿಂಗ್ ತಾನು ಸ್ವೀಕರಿಸಿದ 5,000 ರೂ. ಮೊತ್ತದ ಲಂಚವನ್ನು ಜಗಿದು ನುಂಗಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

ತಕ್ಷಣವೇ ಗಜೇಂದ್ರ ಸಿಂಗ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸಾಕಷ್ಟು ಪ್ರಯತ್ನಗಳ ನಂತರ ಲಂಚದ ನೋಟುಗಳನ್ನು ಅವರ ಬಾಯಿಯಿಂದ ತಿರುಳಿನ ರೂಪದಲ್ಲಿ ಹೊರತೆಗೆಯಲಾಗಿದೆ. ಸದ್ಯ ಗಜೇಂದ್ರ ಸಿಂಗ್ ಆರೋಗ್ಯ ಸ್ಥಿರವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿ ವೇಳೆ ಹಣ ವಸೂಲಿ – 3 ಸೈಬರ್ ಕೇಂದ್ರ ಮಾಲೀಕರ ವಿರುದ್ಧ ಕೇಸ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್