ಬೆಳ್ಳಿ ಪದಕ ಪಡೆದ ಭಾರತೀಯ ಕ್ರೀಡಾ ಪ್ರಾಧಿಕಾರದ ಐವರು ವಿದ್ಯಾರ್ಥಿನಿಯರಿಗೆ ಸನ್ಮಾನ

Public TV
1 Min Read

ಮಡಿಕೇರಿ: ಭೋಪಾಲ್‍ನಲ್ಲಿ ಇತ್ತೀಚೆಗೆ ನಡೆದ ಭಾರತೀಯ 12ನೇ ಹಾಕಿ ಹಿರಿಯ ಬಾಲಕಿಯರ ವಿಭಾಗದಲ್ಲಿ ಪಾಲ್ಗೊಂಡು ಬೆಳ್ಳಿ ಪದಕವನ್ನು ಮಡಿಕೇರಿ ವಿದ್ಯಾರ್ಥಿನಿಯರು ಪಡೆದಿದ್ದಾರೆ. ಈ ಹಿನ್ನೆಲೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಐವರು ವಿದ್ಯಾರ್ಥಿನಿಯರಿಗೆ ಜಿಲ್ಲಾಡಳಿತ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಬುಧವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಬೆಳ್ಳಿ ಪದಕ ಪಡೆದ ಎಸ್.ಪಿ.ಲಿಖಿತ, ಲೀಲಾವತಿ ಬಿ. ಕೊಪ್ಪದ್, ಹೆಚ್.ಜಿ.ಧನುಶ್ರೀ, ಶ್ರಯಾ ಕಾವೇರಮ್ಮ ಬಡುವಂಡ, ದೀಪ್ತಿ ಕರವಟ್ಟಿರ ಅವರಿಗೆ ಶಾಲೂ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಇದನ್ನೂ ಓದಿ:  ಕೋವಿಡ್ ಸೊಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು 

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು, ಭಾರತೀಯ ಹಾಕಿ ಹಿರಿಯ ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿರುವುದು ಶ್ಲಾಘನೀಯ. ತಾವು ಇತರರಿಗೆ ಆದರ್ಶವಾಗಿದ್ದು, ಅದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಅವರು ಸಲಹೆ ಕೊಟ್ಟರು. ಹಾಕಿ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ಜಿಲ್ಲಾಡಳಿತ ವತಿಯಿಂದ ಭಾರತೀಯ ಕ್ರೀಡಾ ಪ್ರಾಧಿಕಾರ ಸಂಸ್ಥೆಯನ್ನು ಮತ್ತಷ್ಟು ಅತ್ಯುನ್ನತ್ತ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಹಾಕಿ: ಕರ್ನಾಟಕಕ್ಕೆ ಜಯದ ಪುಳಕ | Prajavani

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಮಾತನಾಡಿ, ತಮ್ಮ ಸಾಧನೆಗೆ ಅಭಿನಂದನೆ. ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಬೇಕು. ನಿರಂತರ ಅಭ್ಯಾಸ ಮಾಡಿದ್ದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ಆಸಕ್ತಿ ಇದ್ದಲ್ಲಿ ಜಯ ಗಳಿಸಬಹುದು. ಆ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ವ್ಯಕ್ತಿ ಕಾಲಿಡಿದು ಒಳಗೆ ಎಳೆದುಕೊಳ್ಳಲು ಯತ್ನಿಸಿದ ಗೊರಿಲ್ಲಾ – ಬೋನ್‌ದಲ್ಲಿದ್ರೂ ಫುಲ್ ಸ್ಟ್ರಾಂಗ್

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಹಾಕಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಇದೆ. ಆ ದಿಸೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ಕೊಟ್ಟರು.

Share This Article
Leave a Comment

Leave a Reply

Your email address will not be published. Required fields are marked *