ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

Public TV
2 Min Read

ಚೆನ್ನೈ: ತಮಿಳುನಾಡಿನಾದ್ಯಂತ (Tamil Nadu) ದೇವಸ್ಥಾನಗಳ (Temples) ಒಳಭಾಗದಲ್ಲಿ ಮೊಬೈಲ್ ಫೋನ್ (Mobile Phones) ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ (Madras High Court) ಆದೇಶಿಸಿದೆ.

ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ಫೋನ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಅಫ್ಘಾನ್‌ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಟ್‌, ಒಬ್ಬ ಸಾವು

 

ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.

ಭಕ್ತಾಧಿಗಳಿಗೆ ಮೊಬೈಲ್ ಫೋನ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‍ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಇದನ್ನೂ ಓದಿ: ನನ್ನ ಹತ್ಯೆಗೆ ಸ್ಕೆಚ್ – ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಗಂಭೀರ ಆರೋಪ

ದೇಗುಲಗಳಲ್ಲಿ ಫೋನ್‌ ಲಾಕರ್:
ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್‌ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.

ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧವನ್ನು ಜಾರಿಗೊಳಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್‍ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *