ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

Public TV
1 Min Read

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ ಬೆನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ತೆರೆದ ಪ್ರದೇಶಗಳನ್ನು ಹೊರತುಪಡಿಸಿ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಆದೇಶದಲ್ಲಿ ರೈಲುಗಳು, ಬಸ್‍ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್ ವ್ಯಾಸ್ ತಮ್ಮ ಆದೇಶದಲ್ಲಿ ಹೇಳಿದರು. ಇದನ್ನೂ ಓದಿ:  ದೇವಸ್ಥಾನದಲ್ಲಿ ಮದುವೆಯಾಗಲು ಬಿಡಲ್ಲ – ಗುಜರಾತ್ ಯುವತಿ ವಿರುದ್ಧ ಸಿಡಿದ ಬಿಜೆಪಿ ನಾಯಕಿ

mask

ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಈ ನಡುವೆ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆ ಕಾಣುತ್ತಿದೆ. ಮೂರು ತಿಂಗಳ ಬಳಿಕ ಮೊದಲ ಬಾರಿ ನಿತ್ಯ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳ ವರದಿಯಾಗುತ್ತಿದೆ. ಮುಂಬೈ, ಪುಣೆ, ಥಾಣೆಯಂತಹ ಮಹಾ ನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ಆದೇಶದಲ್ಲಿ ತಿಳಿಸಿದರು.

ಕಳೆದ ಎರಡು ವಾರಕ್ಕೆ ಹೋಲಿಸಿದರೇ ಕಳೆದೊಂದು ವಾರದಿಂದ ಒಂಭತ್ತು ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಬಿಎ.4 ಮತ್ತು ಬಿಎ.5 ಉಪವಿಭಾಗಗಳನ್ನು ಹೊಂದಿರುವ ರೋಗಿಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಹಿನ್ನೆಲೆ ನಾವು ಈ ಹಂತದಲ್ಲಿ ಎಚ್ಚರಿಕೆ ವಹಿಸುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೊಮ್ಮಾಯಿ ಹೇಳಿಕೆ ಸ್ವಾಗತಾರ್ಹ, ಚಕ್ರತೀರ್ಥನನ್ನು ಬಂಧಿಸಿ: ನಾರಾಯಣಗೌಡ 

ಶುಕ್ರವಾರ 1,134 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಹೊಸ ಪ್ರಕರಣಗಳ ಪೈಕಿ 763 ಪ್ರಕರಣಗಳು ಮುಂಬೈನಿಂದಲೇ ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *