ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ

Public TV
1 Min Read

ಮುಂಬೈ: ಬಿಜೆಪಿಯು ಹಿಂದುತ್ವವನ್ನು ತನ್ನ ಅನುಕೂಲಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕಾಲಿದಳ ಮತ್ತು ಶಿವಸೇನೆಯಂತಹ ಹಳೆಯ ಘಟಕಗಳು ಈಗಾಗಲೇ ಬಿಜೆಪಿ ಮೈತ್ರಿಯಿಂದ ಹೊರನಡೆದಿದೆ. ಇದರಿಂದಾಗ ಬಿಜೆಪಿ ನೇತೃತ್ವದ ಎನ್‍ಡಿಎ ಈಗಾಗಲೇ ಕುಗ್ಗಿದೆ ಎಂದ ಅವರು ಶಿವಸೇನೆಯನ್ನು ರಾಜ್ಯದ ಹೊರಗೂ ವಿಸ್ತರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು.

ಅಧಿಕಾರದ ಮೂಲಕ ಹಿಂದುತ್ವದ ಉದ್ದೇಶವನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಹಿಂದುತ್ವ ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೊಸ್ಕರ ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಂಡಿದ್ದೆವು. ಆದರೆ ಅಧಿಕಾರಕ್ಕಾಗಿ ಶಿವಸೇನೆ ಎಂದಿಗೂ ಹಿಂದುತ್ವವನ್ನು ಬಳಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ. ಇದರಿಂದ ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯೊಂದಿಗೆ ಕಳೆದ 25 ವರ್ಷಗಳಿಂದ ಮೈತ್ರಿ ಮಾಡಿಕೊಂಡಿದ್ದು ವ್ಯರ್ಥವಾಯಿತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

ಇತ್ತೀಚೆಗೆ ನಡೆದ ನಗರ ಪಂಚಾಯತ್ ಚುನಾವಣೆಯಲ್ಲಿ ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿತ್ತು. ಇದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *