ಭಾರೀ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ

Public TV
1 Min Read

ಮುಂಬೈ: ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಪ್ರತಿ ಲೀಟರ್‌ಗೆ ಕ್ರಮವಾಗಿ 5 ಮತ್ತು 3 ರೂಪಾಯಿಗಳಷ್ಟು ಕಡಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ಅವರಿಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ನವೆಂಬರ್ 4 ಮತ್ತು ಮೇ 22 ರಂದು ವ್ಯಾಟ್ ಅನ್ನು ಕಡಿಮೆ ಮಾಡಿತು. ರಾಜ್ಯಗಳಲ್ಲೂ ತೆರಿಗೆ ಕಡಿತಗೊಳಿಸುವಂತೆ ಸೂಚನೆ ನೀಡಿತು. ಆದರೆ ಈ ಹಿಂದೆ ಇದ್ದ ಮಹಾ ವಿಕಾಸ್ ಸರ್ಕಾರ ಕೇಂದ್ರದ ಸೂಚನೆಯನ್ನು ಅನುಸರಿಸಲಿಲ್ಲ. ನಮ್ಮ ಸರ್ಕಾರ ಪ್ರಸ್ತುತ ಹಣಕಾಸು ಸ್ಥಿತಿಯನ್ನು ಅಧ್ಯಯನ ಮಾಡಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಹತ್ಯೆಗೆ ಸಂಚು- ನಿವೃತ್ತ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

ಪ್ರತಿ ಲೀಟರ್ ಪೆಟ್ರೋಲ್‌ಗೆ 5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲಿನ 3 ರೂ. ವ್ಯಾಟ್ ಅನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ

ಶಿವಸೇನೆ ಜನರ ಕಲ್ಯಾಣಕ್ಕಾಗಿ ಈ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹರ್ಷ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *